ಕರಾವಳಿ

ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ: ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು,‌ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.


ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ನೌಸೀನ್ (22) ಮೃತಪಟ್ಟ ಮಹಿಳೆ. ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಜೊತೆ ಮೂರು ತಿಂಗಳ ಹಿಂದೆ ಪ್ರೇಮ ವಿವಾಹ ವಾಗಿದ್ದರು. ಪ್ರೇಮವಿವಾಹ ಆದರೂ ಕೂಡ ವಿವಾಹ ಸಂದರ್ಭದಲ್ಲಿ 18 ಪವನ್ ಚಿನ್ನವನ್ನು ಉಡುಗೂರೆಯಾಗಿ ನೀಡಲಾಗಿತ್ತು. ಆದರೆ ಹುಡುಗಿ ಕಡೆಯವರು ನೀಡಿದ ವರದಕ್ಷಿಣೆ ಕಡಿಮೆಯಾಗಿದೆ, ಲವ್ ಮಾಡಿ ಮದುವೆಯಾದರಿಂದ ಒಳ್ಳೆ ಹುಡುಗಿ ಸಿಗಲಿಲ್ಲ, ಇಲ್ಲದಿದ್ದರೆ ಒಳ್ಳೆಯ ಹುಡುಗಿ ಸಿಗಬಹುದಿತ್ತು ಎಂದು ಅತ್ತೆ ಝೂಬೈದಾ, ಮಗಳು ಅಜ್ಮೀಯಾ ಮತ್ತು ಗಂಡ ಸೇರಿಕೊಂಡು ಹೀಯಾಳಿಸಿದ್ದಲ್ಲದೆ,ಮಾನಸಿಕ ಕಿರುಕುಳ ಕೊಡುತ್ತಿದ್ದರು. ಈ ಕಾರಣಕ್ಕಾಗಿ ತಂಗಿ ಉಳ್ಳಾಲದ ಗಂಡನ ಮನೆಯಿಂದ ಸಜೀಪ ತಾಯಿ ಮನೆಗೆ ಬಂದಿದ್ದಳು.ಮಾನಸಿಕವಾಗಿ ನೊಂದಿದ್ದ ತಂಗಿ ನೌಸೀನ ಆ.25 ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ,ಈ ಸಾವಿನ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ನಾಸೀರ್ ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.


ಲವ್ ಮ್ಯಾರೇಜ್
ಸಜೀಪ ಮೂಡ ನಿವಾಸಿ ಕೆ.ಎಮ್ ಬಾವ ಅವರ ಮಗಳು ನೌಸೀನ್ ಅವರು ಉಳ್ಳಾಲ ಮೂಲದ ಅಜ್ಮಾನ ಎಂಬವರಿಗೆ ಇನ್ಸ್ಟಾ ಗ್ರಾಂ ಮೂಲಕ ಪರಿಚಯವಾಗಿ ಪರಸ್ಪರ ಪ್ರೀತಿ ಉಂಟಾಗಿ ಮನೆಯವರ ಒಪ್ಪಿಗೆ ಮುಖಾಂತರ ಅಗಸ್ಟ್ .14 ರಂದು ಮದುವೆಯಾಗಿತ್ತು.


ಮಗಳ ಮದುವೆಗಾಗಿ ತಂದೆ 18 ಪವನ್ ಚಿನ್ನವನ್ನು ಉಡುಗೊರೆಯಾಗಿ ನೀಡಿದ್ದರು. ಆದರೆ ಅಜ್ಮಾನ ಮದುವೆಯಾದ ಕೆಲವೇ ದಿನಗಳಲ್ಲಿ ನೌಸೀನ್ ಳ ಒಡವೆಗಳನ್ನು ಮಾರಿದ್ದಾನೆ. ಜೊತೆಗೆ ಇನ್ನಷ್ಟು ಒಡೆವೆಗಳನ್ನು ತರುವಂತೆ ಪೀಡಿಸುತ್ತಿದ್ದ. ಇದು ಅಲ್ಲದೆ,ಅತ್ತೆ ಮತ್ತು ನಾದಿನಿಯವರು ಲವ್ ಮ್ಯಾರೇಜ್ ಆಗಿರುವ ಕಾರಣಕ್ಕಾಗಿ ಮಾನಸಿಕವಾಗಿ ಹಿಂಸೆಯನ್ನು ನೀಡುತ್ತಿದ್ದರು.


ಈ ವಿಚಾರವನ್ನು ಮನೆಯವರಲ್ಲಿ ತಿಳಿಸಿದ್ದಳು. ಮನೆಯವರ ಕಿರುಕುಳ ತಾಳಲಾರದೆ ನೌಸೀನ್ ಅ.24 ರಂದು ತಾಯಿ ಮನೆಗೆ ಬಂದಿದ್ದಳು. ಮರುದಿನ ಮನೆಯವರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ಇವಳು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ಇವಳ ಸಾವಿಗೆ ಗಂಡ ಮತ್ತು ಅತ್ತೆ,ನಾದಿನಿಯವರೇ ಕಾರಣವಾಗಿದೆ. ಹಾಗಾಗಿ ಸೂಕ್ತವಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ನೌಸೀನ್ ಳ ಸಾವಿಗೆ ನ್ಯಾಯ ಒದಗಿಸಬೇಕು ಎಂದು ನೌಸೀನ್ ಳ ಸಂಬಂಧಿ ಸಿದ್ದೀಕ್ ಒತ್ತಾಯ ಮಾಡಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…

9 hours ago

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…

9 hours ago

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…

9 hours ago

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…

9 hours ago

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…

9 hours ago

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…

9 hours ago