ಮುಲ್ಕಿ: ತಾಲ್ಲೂಕಿನ ಸಾರ್ವಜನಿಕರ ಅಹವಾಲುಗಳನ್ನು ಆಲಿಸುವ ಸಂಬಂಧ ಜಿಲ್ಲಾಧಿಕಾರಿಯವರ ಜನತಾ ದರ್ಶನ ಕಾರ್ಯಕ್ರಮವು ಮುಲ್ಕಿ ಕಾರ್ನಾಡಿನ ಬಂಟರ ಸಂಘ ಸಭಾಭವನ ದಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮಾತನಾಡಿ ಮುಲ್ಕಿ ತಾಲೂಕು ವ್ಯಾಪ್ತಿಯ ಜನತಾದರ್ಶನದ ಕಾರ್ಯಕ್ರಮದ ಸಾರ್ವಜನಿಕ ಅಹವಾಲಿನಲ್ಲಿ ಸುಮಾರು 50ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು ವಿಲೇವಾರಿ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅರ್ಜಿಗಳಲ್ಲಿ ಹೆಚ್ಚು ಕುಡಿಯುವ ನೀರು , ಕಂದಾಯ ಇಲಾಖೆಯ ಸಮಸ್ಯೆಗಳು ಇದ್ದು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರ ಪ್ರತಿಯೊಂದು ಅರ್ಜಿಯನ್ನು ವಿಲೇವಾರಿ ಮಾಡಲಾಗುವುದು ಹಾಗೂ ಪ್ರತಿಯೊಬ್ಬ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಪ್ರಯತ್ನಿಸಬೇಕು ಎಂದರು.
ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್, ಯೋಜನಾ ನಗರಾಭಿವೃದ್ಧಿ ಕೋಶದ ನಿರ್ದೇಶಕ ಅಭಿಷೇಕ್, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಾಣಿಕ್ಯ, ಸಹಾಯಕ ಆಯುಕ್ತ ಹರ್ಷವರ್ಧನ,ಮುಲ್ಕಿ ತಾಲೂಕು ತಹಶೀಲ್ದಾರ್ ಪ್ರದೀಪ್ ಕೆ.,ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಶಾಂತಪ್ಪ, ಮಂಗಳೂರು ತಹಶಿಲ್ದಾರ್ ಪ್ರಶಾಂತ್ ಪಾಟೀಲ್ , ಮುಲ್ಕಿ ನ. ಪಂ. ಮುಖ್ಯಾಧಿಕಾರಿ ಇಂದು ಎಂ.ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ದೂರುಗಳಲ್ಲಿ ಮುಖ್ಯವಾಗಿ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿ ಬಳಿ ಬಹುಮಹಡಿ ಕಟ್ಟಡದ ತ್ಯಾಜ್ಯ ನೀರು ತೆರೆದ ಚರಂಡಿಯಲ್ಲಿ ಹರಿಯುತ್ತಿರುವುದರಿಂದ ರೋಗದ ಭೀತಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ, ಮುಲ್ಕಿ ನ.ಪಂ. ವ್ಯಾಪ್ತಿಯ ಕಡವಿನ ಬಾಗಿಲು ಬಳಿ ಗುಡ್ಡೆಯಲ್ಲಿ ಅಪಾಯಕಾರಿ ಮೊಬೈಲ್ ಟವರ್ ಬೀಳುವ ಸ್ಥಿತಿಯಲ್ಲಿದೆ ತೆರವುಗೊಳಿಸಿ, ಪಡುಪಣಂಬೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣದ ಬಗ್ಗೆ ಮೂಢ ಅಧಿಕಾರಿಗಳು ಸ್ಪಷ್ಟನೆ ನೀಡಲಿ, ಕಿನ್ನಿಗೊಳಿ ರಾಜ್ಯ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಸಿ, ಕಾರ್ನಾಡಿನಲ್ಲಿ ಗ್ರಂಥಾಲಯ ನಿರ್ಮಾಣಕ್ಕೆ ಪರವಾನಿಗೆ, ಐಕಳ ಗ್ರಾಮದ ಅಕ್ರಮ ಹಂದಿ ಸಾಕಾಣಿಕಾ ಕೇಂದ್ರ ತೆರವುಗೊಳಿಸಿ, ಉಡುಪಿ ಜಿಲ್ಲೆಯ ಹೆಜಮಾಡಿ ಸಮುದ್ರ ತೀರದಲ್ಲಿ ನಿರ್ಮಾಣವಾಗುತ್ತಿರುವ ಬ್ರೇಕ್ ವಾಟರ್ ಕಾಮಗಾರಿಯಿಂದ ದ.ಕ ಜಿಲ್ಲೆಯ ಚಿತ್ರಾಪು ಪರಿಸರದ ನಿವಾಸಿಗಳಿಗೆ ತೊಂದರೆಯ ಭೀತಿ, ಮುಲ್ಕಿ ಹಳೆಯಂಗಡಿ , ಸುರತ್ಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ನಿಲುಗಡೆ ಹಾಗೂ ತಂಗುದಾಣ ಬೇಕು, ಚಿತ್ರಾಪು ಗಜನಿ ರಸ್ತೆಯಲ್ಲಿ ವಿದ್ಯುತ್ ಕಂಬಗಳು ಬೀಳುವ ಸ್ಥಿತಿಯಲ್ಲಿದ್ದು ತೆರವುಗೊಳಿಸಬೇಕು, ಕಾರ್ನಾಡ್ ಕೈಗಾರಿಕಾ ಪ್ರದೇಶದಲ್ಲಿ ರಾಮ್ ಕಿ ಇಂಡಸ್ಟ್ರಿಯಿಂದ ಬಿಡುವ ವಿಷಾನಿಲದಿಂದ ಪರಿಸರಕ್ಕೆ ಹಾನಿ, ಏಳಿಂಜೆ ಕೃಷಿ ಭೂಮಿಯಲ್ಲಿ ಹೈಟೆನ್ಶನ್ ಹಾದು ಹೋಗುವ ಬಗ್ಗೆ ವಿರೋಧ, ಬಳಕುಂಜೆ, ಕೊಲ್ಲೂರು, ಉಳೆಪಾಡಿ ಪ್ರದೇಶದಲ್ಲಿ ಕೈಗಾರಿಕೆಗಳಿಗೆ ಕೃಷಿ ಭೂಮಿ ಸ್ವಾಧೀನ ನಿಲ್ಲಿಸಬೇಕು, ತಾಲ್ಲೂಕು ವ್ಯಾಪ್ತಿಯಲ್ಲಿ ಸರಕಾರಿ ಕಚೇರಿಯಲ್ಲಿ ಸಿಬ್ಬಂದಿ ಕೊರತೆ, ಶಿಮಂತೂರು ರಸ್ತೆಯಲ್ಲಿ ಅಪಘಾತ ನಿಯಂತ್ರಿಸಿ, ಕೃಷಿಗೆ ಪೂರಕವಾಗಿ ಹೊಯಿಗೆ ಗುಡ್ಡೆ ಚಿತ್ರಾಪು ಬಳಿ ಉಪ್ಪುನೀರಿನ ತಡೆಗೋಡೆ ನಿರ್ಮಾಣ, ಮುಲ್ಕಿ ಪ್ರೆಸ್ ಕ್ಲಬ್ ಗೆ ನಿವೇಶನ ಒದಗಿಸಲು ಜಿಲ್ಲಾಧಿಕಾರಿಗಳ ಸೂಚನೆ ಮೊದಲಾದ ದೂರುಗಳ ಸರಮಾಲೆ ಸಾರ್ವಜನಿಕರಿಂದ ಕೇಳಿ ಬಂದಿದ್ದು ಜಿಲ್ಲಾಧಿಕಾರಿ ಸಮಾಧಾನದಿಂದಲೇ ಉತ್ತರಿಸಿದ್ದು ವಿಶೇಷವಾಗಿತ್ತು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…