ಮುಲ್ಕಿ:ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದ ರೂವಾರಿಯಾಗಿ ಹಾಗೂಕನ್ನಡ ನಾಡುನುಡಿಯ ಅಸ್ಮಿತೆಯನ್ನು ಜಾಗೃತಗೊಳಿಸುವಲ್ಲಿ ಕ್ರಿಯಾಶೀಲರಾಗಿದ್ದ ಡಾ. ಶೇಖರ ಅಜೆಕಾರು ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀಶ್ರೀ ಶ್ರೀ ಶ್ರೀಚಂದ್ರಶೇಖರ ಸ್ವಾಮೀಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರು ಮಾಧ್ಯಮದೊಂದಿಗೆ ಮಾತನಾಡಿ ಕನ್ನಡ ನಾಡು ನುಡಿಗಾಗಿ ವರ್ಷದ 365 ದಿನವೂ ವಿನೂತನ ಕಾರ್ಯಕ್ರಮ ನಡೆಸುವ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ನಿರಂತರ ಕ್ರಿಯಾಶೀಲರಾಗಿದ್ದರು ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜೀ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿ ಕನ್ನಡ ಉಳಿಸಿ ಬೆಳೆಸಲು ಡಾ. ಶೇಖರ್ ಅಜೆಕಾರುರವರ ಕೊಡುಗೆ ಅಪಾರ ವಾಗಿದ್ದು ಕನ್ನಡ ಪರ ಪ್ರತಿಯೊಂದು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದರು ಎಂದರು
ಡಾ. ಶೇಖರ್ ಅಜೆಕಾರು ನಿಧನಕ್ಕೆ ವೇ.ಮೂ.ವಾದಿರಾಜ ಉಪಾಧ್ಯಾಯ ಕೊಲಕಾಡಿ,ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಧಾರ್ಮಿಕ ಪರಿಷತ್ ಮಾಜೀ ಸದಸ್ಯ ಭುವನಾಭಿರಾಮ ಉಡುಪ, ಉದ್ಯಮಿ ಅರವಿಂದ ಪೂಂಜ ಕಾರ್ನಾಡ್, ಮುಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಪದಾಧಿಕಾರಿಗಳಾದ ಅಶೋಕ್ ಕುಮಾರ್ ಶೆಟ್ಟಿ, ಗಂಗಾಧರ್ ಶೆಟ್ಟಿ ಬರ್ಕೆ ತೋಟ,ಮುಲ್ಕಿ ಜಿಎಸ್ಬಿ ಸಭಾದ ಅತುಲ್ ಕುಡ್ವ ,ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ಕಿಶೋರ್ ಶೆಟ್ಟಿ ಬಪ್ಪನಾಡು,ಗೌತಮ್ ಜೈನ್ ಮುಲ್ಕಿ ಅರಮನೆ, ಜೊಸ್ಸಿ ಪಿಂಟೋ ಕಿನ್ನಿಗೋಳಿ, ಮುಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಶೆಟ್ಟಿ, ಸದಸ್ಯರಾದ ರಘುನಾಥ ಕಾಮತ್ ಕೆಂಚನಕೆರೆ, ಪುನೀತ್ ಕೃಷ್ಣ, ಹರೀಶ್ ಹೆಜ್ಮಾಡಿ, ಗಣೇಶ್ ದೇವಾಡಿಗ ಪಂಜ, ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.



