ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಪುತ್ತೂರಿನ ಹಿರಿಯ ಯಕ್ಷಗಾನ ಕಲಾವಿದ ಪೆರುವಡಿ ನಾರಾಯಣ ಭಟ್ ಇನ್ನಿಲ್ಲ

ಪುತ್ತೂರು: ಹಿರಿಯ ಯಕ್ಷಗಾನ ಕಲಾವಿದ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಬಪ್ಪಳಿಗೆ ತೆಂಕಿಲ ನೂಜಿ ನಿವಾಸಿ ಪೆರುವಡಿ ನಾರಾಯಣ ಭಟ್(೯೮) ವಯೋಸಹಜ ಅಸೌಖ್ಯದಿಂದ ಮಂಗಳವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.


ಪಾಪಣ್ಣ ಭಟ್ರು ಎಂದೇ ಖ್ಯಾತಿ ಪಡೆದಿದ್ದ ನಾರಾಯಣ ಭಟ್ ಅವರು ಯಕ್ಷಗಾನ ಹಾಸ್ಯ ಪಾತ್ರದಲ್ಲಿ ಮನೆ ಮಾತಾಗಿದ್ದರು. ತನ್ನ ೧೪ನೇ ವಯಸ್ಸಿನಲ್ಲಿಯೇ ಯಕ್ಷರಂಗ ಪ್ರವೇಶ ಮಾಡಿದ್ದ ಅವರು ಮೊದಲಿಗೆ ಧರ್ಮಸ್ಥಳ ಮೇಳದಲ್ಲಿ ಸೇವೆ ಆರಂಭಿಸಿದ್ದ ಅವರು ಬಳಿಕ ತನ್ನ ಸ್ವಂತ `ಮೂಲ್ಕಿ ಮೇಳ’ವನ್ನು ಕಟ್ಟಿಕೊಂಡು ಸುಮಾರು ೧೩ ವರ್ಷಗಳ ಕಾಲ ಮೇಳವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ಬಳಿಕ ಸುರತ್ಕಲ್ ಮೇಳದಲ್ಲಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ಯಕ್ಷಗಾನದ ಹಾಸ್ಯ ಪಾತ್ರಗಳಿಗೆ ವಿಶೇಷ ಮಾನ ಮತ್ತು ಮಾನ್ಯತೆ ತಂದು ಕೊಟ್ಟಿರುವ ಹಾಸ್ಯ ಕಲಾವಿದರಾದ ಅವರು ಪಾಪಣ್ಣ ವಿಜಯ' ಪ್ರಸಂಗದಲ್ಲಿಪಾಪಣ್ಣ’ ಪಾತ್ರದ ಮೂಲಕ ಜನಮಾನಸದಲ್ಲಿ ಅಚ್ಚಳಿಯದ ಮನ್ನಣೆಯನ್ನು ಗಳಿಸಿದ್ದರು. ದಮಯಂತಿ ಪುನರ್‌ಸ್ವಯಂವರ' ಪ್ರಸಂಗದಲ್ಲಿಬಾಹುಕ’ ಪಾತ್ರ ನಿರ್ವಹಿಸಿ ಪಾತ್ರಕ್ಕೆ ಹೊಸ ರೂಪ ನೀಡಿದ್ದರು. ಪೌರಾಣಿಕ ಪ್ರಸಂಗಗಳಲ್ಲಿ ಬಹುತೇಕ ಎಲ್ಲಾ ಪಾತ್ರಗಳನ್ನು ನಿರ್ವಹಿಸಿದ್ದ ಅವರು ತುಳು ಪ್ರಸಂಗಗಳಲ್ಲಿಯೂ ತಮ್ಮದೇ ಛಾಪು ಮೂಡಿಸಿದ್ದ ಕಲಾವಿದ.
ಪದ್ಯಾಣ ಕುಟುಂಬದ ನಾರಾಯಣ ಭಟ್ ಅವರು ತನ್ನ ಬಾಲ್ಯದಲ್ಲಿಯೇ ತಂದೆಯನ್ನು ಕಳೆದುಕೊಂಡು ಪೆರುವಡಿಯಲ್ಲಿನ ಅಜ್ಜನ ಮನೆಯಲ್ಲಿ ಬೆಳೆದಿದ್ದರು. ಅಲ್ಲಿಯೇ ಯಕ್ಷರಂಗಕ್ಕೂ ಪಾದಾರ್ಪಣೆ ಮಾಡಿದ್ದರು. ಅದರಿಂದಾಗಿ ಅವರು ಪೆರುವಡಿ ನಾರಾಯಣ ಭಟ್ ಎಂದೇ ಪ್ರಸಿದ್ದರಾಗಿದ್ದರು.
ಮೃತರು ಪತ್ನಿ, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.

ಮೃತರ ಅಂತಿಮ ಕ್ರಿಯೆ ಬುಧವಾರ ಬೆಳಗ್ಗೆ ಚಿಕ್ಕಪುತ್ತೂರಿನ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!