ಪುತ್ತೂರು: ಹಿರಿಯ ಯಕ್ಷಗಾನ ಕಲಾವಿದ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಬಪ್ಪಳಿಗೆ ತೆಂಕಿಲ ನೂಜಿ ನಿವಾಸಿ ಪೆರುವಡಿ ನಾರಾಯಣ ಭಟ್(೯೮) ವಯೋಸಹಜ ಅಸೌಖ್ಯದಿಂದ ಮಂಗಳವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಪಾಪಣ್ಣ ಭಟ್ರು ಎಂದೇ ಖ್ಯಾತಿ ಪಡೆದಿದ್ದ ನಾರಾಯಣ ಭಟ್ ಅವರು ಯಕ್ಷಗಾನ ಹಾಸ್ಯ ಪಾತ್ರದಲ್ಲಿ ಮನೆ ಮಾತಾಗಿದ್ದರು. ತನ್ನ ೧೪ನೇ ವಯಸ್ಸಿನಲ್ಲಿಯೇ ಯಕ್ಷರಂಗ ಪ್ರವೇಶ ಮಾಡಿದ್ದ ಅವರು ಮೊದಲಿಗೆ ಧರ್ಮಸ್ಥಳ ಮೇಳದಲ್ಲಿ ಸೇವೆ ಆರಂಭಿಸಿದ್ದ ಅವರು ಬಳಿಕ ತನ್ನ ಸ್ವಂತ `ಮೂಲ್ಕಿ ಮೇಳ’ವನ್ನು ಕಟ್ಟಿಕೊಂಡು ಸುಮಾರು ೧೩ ವರ್ಷಗಳ ಕಾಲ ಮೇಳವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ಬಳಿಕ ಸುರತ್ಕಲ್ ಮೇಳದಲ್ಲಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
ಯಕ್ಷಗಾನದ ಹಾಸ್ಯ ಪಾತ್ರಗಳಿಗೆ ವಿಶೇಷ ಮಾನ ಮತ್ತು ಮಾನ್ಯತೆ ತಂದು ಕೊಟ್ಟಿರುವ ಹಾಸ್ಯ ಕಲಾವಿದರಾದ ಅವರು ಪಾಪಣ್ಣ ವಿಜಯ' ಪ್ರಸಂಗದಲ್ಲಿಪಾಪಣ್ಣ’ ಪಾತ್ರದ ಮೂಲಕ ಜನಮಾನಸದಲ್ಲಿ ಅಚ್ಚಳಿಯದ ಮನ್ನಣೆಯನ್ನು ಗಳಿಸಿದ್ದರು. ದಮಯಂತಿ ಪುನರ್‌ಸ್ವಯಂವರ' ಪ್ರಸಂಗದಲ್ಲಿಬಾಹುಕ’ ಪಾತ್ರ ನಿರ್ವಹಿಸಿ ಪಾತ್ರಕ್ಕೆ ಹೊಸ ರೂಪ ನೀಡಿದ್ದರು. ಪೌರಾಣಿಕ ಪ್ರಸಂಗಗಳಲ್ಲಿ ಬಹುತೇಕ ಎಲ್ಲಾ ಪಾತ್ರಗಳನ್ನು ನಿರ್ವಹಿಸಿದ್ದ ಅವರು ತುಳು ಪ್ರಸಂಗಗಳಲ್ಲಿಯೂ ತಮ್ಮದೇ ಛಾಪು ಮೂಡಿಸಿದ್ದ ಕಲಾವಿದ.
ಪದ್ಯಾಣ ಕುಟುಂಬದ ನಾರಾಯಣ ಭಟ್ ಅವರು ತನ್ನ ಬಾಲ್ಯದಲ್ಲಿಯೇ ತಂದೆಯನ್ನು ಕಳೆದುಕೊಂಡು ಪೆರುವಡಿಯಲ್ಲಿನ ಅಜ್ಜನ ಮನೆಯಲ್ಲಿ ಬೆಳೆದಿದ್ದರು. ಅಲ್ಲಿಯೇ ಯಕ್ಷರಂಗಕ್ಕೂ ಪಾದಾರ್ಪಣೆ ಮಾಡಿದ್ದರು. ಅದರಿಂದಾಗಿ ಅವರು ಪೆರುವಡಿ ನಾರಾಯಣ ಭಟ್ ಎಂದೇ ಪ್ರಸಿದ್ದರಾಗಿದ್ದರು.
ಮೃತರು ಪತ್ನಿ, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.
ಮೃತರ ಅಂತಿಮ ಕ್ರಿಯೆ ಬುಧವಾರ ಬೆಳಗ್ಗೆ ಚಿಕ್ಕಪುತ್ತೂರಿನ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…