ಕರಾವಳಿ

ಚಂದ್ರಶೇಖರ ಸ್ವಾಮೀಜಿಯವರಿಗೆ ಉಚ್ಛ ನ್ಯಾಯಾಲಯದಲ್ಲಿ ಐತಿಹಾಸಿಕ ಜಯದ ತೀರ್ಪು; ಆದಾಯ ತೆರಿಗೆ ಅಧಿಕಾರಿಗಳಿಗೆ ಚಾಟಿ ಬೀಸಿದ ಹೈಕೋರ್ಟ್

ಬೆಂಗಳೂರು : ಮಹತ್ವದ ಬೆಳವಣಿಗೆಯ ಪ್ರಕರಣವೊಂದರಲ್ಲಿ ಆದಾಯ ತೆರಿಗೆ ಅಧಿಕಾರಿಗಳ ವಿರುದ್ಧ ನ್ಯಾಯಾಲಯದಲ್ಲಿ ಸುಧೀರ್ಘ ಕಾಲ ಸಮರ ಸಾರಿದ್ದ ಬೆಂಗಳೂರಿನ ಅಂತಾರಾಷ್ಟ್ರೀಯ ವಾಸ್ತುತಜ್ಞರು, ಆಧ್ಯಾತ್ಮಿಕ ಗುರು, ಜ್ಯೋತಿಷ್ಯರಾದ ಶ್ರೀ ಚಂದ್ರಶೇಖರ ಸ್ವಾಮೀಜಿಯರ ಪರವಾಗಿ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು ಪ್ರಕರಣದ ಆರೋಪಿ ಸ್ಥಾನದಲ್ಲಿದ್ದ ಆದಾಯ ತೆರಿಗೆ ಅಧಿಕಾರಿಗಳಿಗೆ ಹೈಕೋರ್ಟ್ ನ್ಯಾಯಾಧೀಶರು ತೀವ್ರವಾದ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.


2013ರ ಮೇ 5ರಂದು ಆದಾಯ ತೆರಿಗೆ ದಾಳಿ ಎಂಬಂತೆ ಈ ಪ್ರಕರಣವನ್ನು ಬಿಂಬಿಸಿ, ಮಹತ್ತರವಾದ ದಾಖಲೆಗಳನ್ನು ಅಧಿಕಾರಿಗಳ ತಂಡವು ವಶಪಡಿಸಿಕೊಂಡಿತ್ತು ಇದನ್ನು ನೇರವಾಗಿ ನ್ಯಾಯಾಲಯದಲ್ಲಿಯೇ ಪ್ರಶ್ನಿಸಿದ ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಪರವಾಗಿ 2023ರ ಆಗಸ್ಟ್ 30ರಂದು ಬೆಂಗಳೂರಿನ ಹೈಕೋರ್ಟ್ ನ್ಯಾಯಪೀಠವು ಸ್ವಾಮೀಜಿಯವರಿಂದ ವಶಪಡಿಸಿಕೊಂಡ ಎಲ್ಲಾ ದಾಖಲೆಗಳನ್ನು ಕೂಡಲೆ ಹಿಂದುರಿಗಿಸಬೇಕು,ಹಾಗೂ ಸಮಾಜದಲ್ಲಿ ಅವರ ಬಗ್ಗೆ ಇರುವ ಗೌರವಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಅಧಿಕಾರಿಗಳು ವರ್ತಿಸಬೇಕಾಗಿತ್ತು. ಕಾರಣವಿಲ್ಲದೇ, ಪ್ರಕರಣದಲ್ಲಿ ವಿನಾ ಕಾರಣ ಅವರ ಹೆಸರನ್ನು ತಳುಕು ಹಾಕಿಕೊಂಡು ಹಾಗೂ ಅವರ ವಿರುದ್ಧ ಕ್ರಮ ಕೈಗೊಂಡಿದ್ದು ಸಮಾಜವೇ ಮೆಚ್ಚುವಂತದ್ದಲ್ಲ ಎಂದು ಆದೇಶಿಸಿದ್ದಾರೆ.
ಈ ನಡುವೆ ಪ್ರಕರಣದಲ್ಲಿ ವಿವಿಧ ದಾಖಲೆಗೆ ಸಂಬಂಧಿಸಿದಂತೆ ಮೈಸೂರಿನ ಮಹಾರಾಜರಾದಶ್ರೀ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಸಹ ಸ್ವಾಮೀಜಿಯವರ ಪರವಾಗಿ ಸಾಕ್ಷಿ ನುಡಿದಿದ್ದು ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಪ್ರಕರಣಕ್ಕೆ ಪುಷ್ಠಿ ನೀಡಿತ್ತು. ಬೆಂಗಳೂರಿನ ತೆರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು, ಕಮಿಷನರ್, ಸಹಾಯಕ ಕಮಿಷನರ್, ಜಿಲ್ಲಾ ಅಧಿಕಾರಿಗಳನ್ನು ಪ್ರತಿವಾದಿಗಳನ್ನಾಗಿ ಮಾಡಿ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ ಸ್ವಾಮೀಜಿಯವರು ನೇರವಾಗಿ ಇವರ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಯಾಕೆ ದಾಖಲಿಸಬಾರದು ಎಂದು ನ್ಯಾಯಾಧೀಶರೇ ಪ್ರಶ್ನಿಸಿರುವುದು ಪ್ರಕರಣದ ಗಂಭೀರತೆಗೆ ಸಾಕ್ಷಿಯಾಗಿದೆ.


ಸುಪ್ರೀಂ ಕೋರ್ಟ್ ನ ಹಿರಿಯ ವಕೀಲರು ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಪರವಾಗಿ ನ್ಯಾಯಾಲಯದಲ್ಲಿ ವಾದವನ್ನು ಮಂಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಆದಾಯ ತೆರಿಗೆ ಇಲಾಖೆ ಯವರು ಹೈಕೋರ್ಟ್ ವಿಭಾಗ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ವಿಚಾರಣೆಗೆ ಕೈಗೊಂಡ ವಿಭಾಗ ಪೀಠ ಆದಾಯ ತೆರಿಗೆ ಯವರು ಸಲ್ಲಿಸಿದ್ದ ಅರ್ಜಿ ಯನ್ನು ತಿರಸ್ಕರಿಸಿ,ಮಹತ್ವದ ಹೈಕೋರ್ಟ್ ಆದೇಶವನ್ನು ಪಾಲಿಸುವಂತೆ ಸೂಚಿಸಿತು.ಹತ್ತು ವರ್ಷಗಳ ಸುದೀರ್ಘ ಕಾನೂನು ಸಮರದಲ್ಲಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿಯವರು ಐತಿಹಾಸಿಕ ವಿಜಯ ಸಾಧಿಸಿದ್ದಾರೆ.
ಶ್ರೀ ಚಂದ್ರಶೇಖರ ಸ್ವಾಮೀಜಿ ಸೇವಾಶ್ರಮದ ಮೂಲಕ ಸಮಾಜದಲ್ಲಿ ಧಾರ್ಮಿಕ, ಸಾಂಸ್ಕೃತಿಕ, ಕ್ರೀಡೆಯಲ್ಲಿನ ಸಾಧಕರನ್ನು ಗುರುತಿಸಿ ಗೌರವಿಸಿ, ನೆರವನ್ನು ನೀಡುತ್ತಾ, ಸಾಮಾಜಿಕ ಚಿಂತನೆಯೊಂದಿಗೆ ಕೋಟ್ಯಾಂತರ ವೆಚ್ಚದಲ್ಲಿ ವಿವಿಧ ಯೋಜನೆಗಳನ್ನು ಕಾರ್ಯರೂಪಕ್ಕೆ ಸ್ವಾಮೀಜಿಯವರ ಸಮಾಜ ಸ್ಪಂದನೆಯೇ ಈ ಗೆಲುವಿಗೆ ಮೂಲ ಕಾರಣ ಎಂದು ಅವರ ಅಭಿಮಾನಿಗಳು ವ್ಯಾಖ್ಯಾನಿಸಿದ್ದಾರೆ. ಇಂತಹ ಅಡತಡೆಗಳು ನೂರಾರು ಬಂದರೂ ಸಹ ಅವರನ್ನು ವಿಚಲಿತರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…

16 hours ago

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

16 hours ago

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…

2 days ago

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…

3 days ago

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…

3 days ago

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…

4 days ago