ಹಳೆಯಂಗಡಿಯಲ್ಲಿ ನ.4-11 ವರೆಗೆ ವಿದ್ಯಾವಿನಾಯಕ ಯುವಕ ಮಂಡಲದ ಸುವರ್ಣಮಹೋತ್ಸವ, ರಜತ ಸೇವಾ ಟ್ರಸ್ಟ್ ನ ಬೆಳ್ಳಿ ಹಬ್ಬದ ಸಂಭ್ರಮ
ಹಳೆಯಂಗಡಿ: ಮೂರು ಬಾರಿ ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದ ಹಳೆಯಂಗಡಿ ಶ್ರೀ ವಿದ್ಯಾವಿನಾಯಕ ಯುವಕ ಮಂಡಲ ದ ಸುವರ್ಣ ಮಹೋತ್ಸವ ಹಾಗೂ ಶ್ರೀ ವಿದ್ಯಾ ವಿನಾಯಕ ರಜತ ಸೇವಾಟ್ರಸ್ಟ್ ದ ಬೆಳ್ಳಿ ಹಬ್ಬ ಮಹೋತ್ಸವ ನ.4 ರಿಂದ 11 ರವೆರೆಗೆ ನಡೆಯಲಿದೆ ಎಂದು ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸುಧಾಕರ ಅಮೀನ್ ಹೇಳಿದರು .
ಉತ್ಸವದ ಅಂಗವಾಗಿ ಯುವಕ ಮಂಡಲದ ಬೊಳ್ಳೂರು ವಾರಿಜ ವಾಸುದೇವ ಕಲಾ ವೇದಿಕೆಯಲ್ಲಿ ತುಳು ನಾಟಕ ಸ್ಪರ್ಧೆ, ವೈವಿಧ್ಯಮಯ ಪ್ರತಿಭಾ ಸ್ಪರ್ಧೆ, ಎಚ್.ನಾರಾಯಣ ಸನಿಲ್ ದತ್ತಿ ಬಹುಮಾನ ಮತ್ತು ವಿದ್ಯಾರ್ಥಿ ವೇತನ , ಮುಕ್ತ ಭಜನಾ ಸ್ಪರ್ಧೆ, ಯುವಕ ಮಂಡಲ, ಯುವತಿ ಮತ್ತುಮಹಿಳಾ ಮಂಡಲದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಬಿ.ಸೂರ್ಯ ಕುಮಾರ್, ಕಾರ್ಯಾಧ್ಯಕ್ಷ ಸುಧಾಕರ ಅಮೀನ್, ಗೌ.ಪ್ರ.ಕಾರ್ಯದರ್ಶಿ ರಾಮದಾಸ್ ಪಾವಂಜೆ, ಕೋಶಾಧಿಕಾರಿ ಪರಮೇಶ್ವರ ಪಿ., ರಜತ ಸೇವಾ ಟ್ರಸ್ಟ್ ದ ಗೌ.ಪ್ರ. ಕಾರ್ಯದರ್ಶಿ ಸ್ಟ್ಯಾನಿ ಡಿ ಕೋಸ್ಟ, ಯುವಕ ಮಂಡಲದ ಅಧ್ಯಕ್ಷ ನಾಗೇಶ್ ಟಿ.ಜಿ., ಸಲಹಾ ಸಮಿತಿದ ಮೋಹನ್ ಬಂಗೇರ, ಹಿಮಕರ ಕೋಟ್ಯಾನ್, ಹನುಮಂತ ಪೂಜಾರ್ ಮತ್ತಿತರರು ಉಪಸ್ಥಿತರಿದ್ದರು .
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…