ಕಿನ್ನಿಗೋಳಿ : ಸಂಜೀವಿನಿ ಕರ್ನಾಟಕ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾತಯತ್ ಮುಲ್ಕಿ ತಾಲೂಕು ಪಂಚಾಯತ್ ಹಾಗೂ ಕೆಮ್ರಾಲ್ ಗ್ರಾಮ ಪಂಚಾಯತ್ ಇವುಗಳ ಸಹಕಾರದೊಂದಿಗೆ ಕೋರ್ದಬ್ಬು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ.) ಇದರ ವಾರ್ಷಿಕ ಮಹಾ ಸಭೆ ಇಂದು ಕೆಮ್ರಾಲ್ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಿತು.
ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಮಯ್ಯದಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಇವರು ಒಕ್ಕೂಟದ ಅಭಿವೃಧ್ದಿ ಕೆಲಸಗಳ ಮಾಹಿತಿ ನೀಡಿದರು. ಕೆಮ್ರಾಲ್ ಗ್ರಾಮ ಪಂಚಾಯತ್ ಅಭಿವೃಧ್ದಿ ಅಧಿಕಾರಿ ಅರುಣ್ ಪ್ರದೀಪ್ ಡಿ ಸೋಜ ಸಂಜೀವಿನಿ ಒಕ್ಕೂಟದ ಹಾಗೂ ಕೆಲವೊಂದು ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕೋರ್ದಬ್ಬು ಸಂಜೀವಿನಿ ಅಧ್ಯಕ್ಷರಾದ ಶ್ರೀಮತಿ ಗೀತಾ ಅರ್ ಶೆಟ್ಟಿ ಇವರು ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ತಾಲೂಕು ವ್ಯಾವಸ್ಥಪಕರಾದ ಅಶೋಕ್ ಇವರ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಮೇಲ್ವಚಾರಕರು ಅದ ಮೋಹನ್ ಇವರು ನೂತನ ಸಮಿತಿಯನ್ನು ರಚನೆ ಮಾಡಿದರು. ಒಕ್ಕೂಟದ ಸ್ಥಳೀಯ ಸಂಪನ್ಮೂಲ ವ್ಯಕ್ತಿಯಾದ ಮಮತಾ ಸ್ವಾಗತಿಸಿದರು. ಮುಖ್ಯ ಪುಸ್ತಕದ ಬರಹಗಾರರಾದ ಸ್ನೇಹಿತ ಇವರು ನಿರೂಪಿಸಿದರು. ಅಮಿತಾ ಇವರು ಒಕ್ಕೂಟದ ಪೂರ್ಣ ವರದಿಯನ್ನು ಮಂಡಿಸಿದರು. ಒಕ್ಕೂಟದ ಸ್ಥಳೀಯ ಸಂಪನ್ಮೂಲ ವ್ಯಕ್ತಿಯಾದ ವೀಣಾ ರವರು ವಂದನಾರ್ಪನಣೆಗೈದರು. ಈ ಸಂದರ್ಭದಲ್ಲಿ ಕೆಮ್ರಾಲ್ ಗ್ರಾಮ ಪಂಚಾಯತ್ನ ಉಪಾಧ್ಯಕ್ಷರು, ಸರ್ವಸದಸ್ಯರು, ಪಂಚಾಯತ್ ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಗುಂಪಿನ ಸದಸ್ಯರು , ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಈ ವೇಳೆ ಒಕ್ಕೂಟದ ಅಧ್ಯಕ್ಷೆ ಹಾಗೂ ಕಾರ್ಯದರ್ಶಿಯವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…