ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ನೇತೃತ್ವದಲ್ಲಿ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆ, ರೆಡ್‌ಕ್ರಾಸ್ ಮಂಗಳೂರು, ಆಳ್ವಾಸ್ ಹೆಲ್ತ್ ಸೆಂಟರ್ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್ ಮೂಡುಬಿದಿರೆಯ ಸಹಯೋಗದಲ್ಲಿ ಶುಕ್ರವಾರ ಆಳ್ವಾಸ್ ಕಾಲೇಜಿನಲ್ಲಿ ಮೆಗಾ ರಕ್ತದಾನ ಶಿಬಿರ ನಡೆಯಿತು. ಕಾಲೇಜಿನ ವಿದ್ಯಾರ್ಥಿಗಳು ಒಟ್ಟು 449 ಯುನಿಟ್ ರಕ್ತದಾನ ಮಾಡಿದರು.
ಶಿಬಿರ ಉದ್ಘಾಟಿಸಿದ ಗೇಲ್ ಪೆಟ್ರೋ ಕೆಮಿಕಲ್ಸ್ನ ವೈದ್ಯಕೀಯ ಸಲಹಾ ಅಧಿಕಾರಿ, ಡಾ ಜೆ ಎನ್ ಭಟ್, ದೇಶದಲ್ಲಿ ೪ ಕೋಟಿ ರಕ್ತದಾನಿಗಳ ಅವಶ್ಯಕತೆ ಇದ್ದು, ೪.೫ ಲಕ್ಷ ದಾನಿಗಳು ಮಾತ್ರ ಇದ್ದಾರೆ. ಜೀವನದಲ್ಲಿ ಒಮ್ಮೆಯಾದರೂ ರಕ್ತದಾನ ಮಾಡಬೇಕು. ಒಬ್ಬ ವ್ಯಕ್ತಿ ಯೌವನದಿಂದ ಒಟ್ಟು ಸುಮಾರು ೮೦ರಿಂದ ೯೦ ಬಾರಿ ರಕ್ತದಾನ ಮಾಡಬಹುದು.
ಪುರುಷರು ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು ಎಂದ ಅವರು, ನಾನು ೩೬ ಬಾರಿ ರಕ್ತದಾನ ಮಾಡಿದ್ದೇನೆ ಎಂದರು. ರಕ್ತದಾನವೂ ದೇಶಪ್ರೇಮ. ಬದ್ಧತೆಯಿಂದ ರಕ್ತದಾನ ಮಾಡಿ ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ರಕ್ತದಾನವು ಜೀವದಾನದಷ್ಟೇ ಪ್ರಮುಖ ಎಂದರು. ಈ ರಕ್ತದಾನ ಶಿಬಿರದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಎಲ್ಲಾ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು ಹಾಗೂ ಮೂಡುಬಿದಿರೆಯ ಸುತ್ತಮುತ್ತಲಿನ ಕಾಲೇಜುಗಳಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡರು.
ಎಚ್‌ಡಿಎಫ್‌ಸಿ ಶಾಖಾ ಕಾರ್ಯಾಕಾರಿ ವ್ಯವಸ್ಥಾಪಕಿ ಸುಶ್ಮಿತಾ ಶೆಟ್ಟಿ ಇದ್ದರು. ಆಳ್ವಾಸ್ ಕಾಲೇಜಿನ ಪ್ರಾಚರ‍್ಯ ಡಾ ಕುರಿಯನ್, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ವೆನ್‌ಲಾಕ್ ಆಸ್ಪತ್ರೆಯ ವೈದ್ಯ ಡಾ ಶರತ್ ಕುಮಾರ್ ರಾವ್, ಐಆರ್‌ಸಿಎಸ್ ಜಿಲ್ಲಾ ಸಂಯೋಜಕ ಪ್ರವೀಣಕುಮಾರ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಶಶಾಂಕ್ ಕಾರ್ಯಕ್ರಮ ನಿರೂಪಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…