ವಿದ್ಯಾರ್ಥಿಗಳು ಕಲಿಕೆ ಜತೆಗೆ ಕ್ರೀಡೆಗೂ ಆದ್ಯತೆಯನ್ನು ನೀಡಬೇಕು. ಪಠ್ಯದಲ್ಲಿ ಸಾಧನೆ ಮಾಡಿದಂತೆ ಕ್ರೀಡೆಯಲ್ಲೂ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗವಕಾಶಗಳಿವೆ ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್ ಹೇಳಿದ್ದಾರೆ.

ಇವರು ಶಾಲಾ ಶಿಕ್ಷಣ ಇಲಾಖೆ ಹಾಗೂ ನ್ಯೂ ವೈಬ್ರೆಂಟ್ ಪ.ಪೂ ಕಾಲೇಜು ಸಂಯುಕ್ತ ಆಶ್ರಯದಲ್ಲಿ, ಮೂಡುಬಿದಿರೆ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮಾತಾನಾಡ್ತ, ಕ್ರೀಡೆಯಲ್ಲಿ ಸೋಲು ಗೆಲವು ಇರುತ್ತದೆ. ಕ್ರೀಡಾಪಟುಗಳು ಕ್ರೀಡಾ ಸ್ಪೂರ್ತಿಯಿಂದ ಆಟವಾಡಿ ಎಂದ್ರು.



