ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಹಾಗೂ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ‘ಪ್ರಜ್ಯೋತಿ 2023’ ಕಾರ್ಯಕ್ರಮವನ್ನು ಇದೇ ಬರುವ ನವೆಂಬರ್ 5ರಂದು ಕಾಲೇಜಿನ ಭಾವಪ್ರಕಾಶ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ ಎಂದು ಹಳೆ ವಿದ್ಯಾರ್ಥಿ ಸಂಘದ ಸಹ ಕಾರ್ಯದರ್ಶಿ ವ್ಯಾಸರಾಜ ತಂತ್ರಿ ಹೇಳಿದ್ದಾರೆ.

ಇವರು ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತಾನಾಡಿ, ಕಾಲೇಜಿನ ಹಳೆವಿದ್ಯಾರ್ಥಿ ಹಾಗೂ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ವಹಿಸಲಿದ್ದಾರೆ ಅಂತ ಮಾಹಿತಿ ನೀಡಿದ್ದಾರೆ. ಇನ್ನೂ ಈ ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ಪ್ರಾಂಶುಪಾಲೆ ಡಾ. ಮಮತಾ ಕೆ.ವಿ., ವೈದ್ಯಕೀಯ ಅಧೀಕ್ಷಕರಾದ ಡಾ. ನಾಗರಾಜ್, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಎನ್.ಟಿ. ಅಂಚನ್, ಕೋಶಾಧಿಕಾರಿ ಸಂದೀಪ್ ಸನಿಲ್, ಪದಾಧಿಕಾರಿಗಳಾದ ಶ್ರೀನಿಧಿ ಬಲ್ಲಾಳ್, ಸಂದೇಶ್ ಕುಮಾರ್ ಉಪಸ್ಥಿತರಿದ್ದರು.



