ಕರಾವಳಿ

ಶತಾಯುಷಿ ಅಂಗಡಿಮಾರು ಕೃಷ್ಣ ಭಟ್ಟರು ನಿಧನ

ಮುಲ್ಕಿ:ಪೇಜಾವರ ಸ್ವಾಮೀಜಿಗಳ ಪೂರ್ವಾಶ್ರಮದ ತೀರ್ಥ ರೂಪರಾದ ಶತಾಯುಷಿ ಪಕ್ಷಿಕೆರೆ ಸಮೀಪದ ಅಂಗಡಿಮಾರು ಕೃಷ್ಣ ಭಟ್ಟರು(102) ಭಾನುವಾರ ರಾತ್ರಿ ನಿಧನರಾದರು.

ಅವರು ಪೇಜಾವರ ವಿಶ್ವ ಪ್ರಸನ್ನ ಸ್ವಾಮೀಜಿ ಸಹಿತ 5 ಪುತ್ರರು ಹಾಗೂ 6 ಪುತ್ರಿಯರನ್ನು ಅಗಲಿದ್ದಾರೆ. ಪಕ್ಷಿಕೆರೆ ಸಮೀಪದ ಅಂಗಡಿಮಾರು ಬಳಿ ಹಿರಿಯ ಕೃಷಿಕರಾಗಿದ್ದ ಅವರು ಕಳೆದ ಹಲವಾರು ವರ್ಷಗಳಿಂದ ಪುರೋಹಿತ ವೃತ್ತಿ ಜೊತೆಗೆ ಅವರು ತುಳುನಾಡು ಪಂಚಾಂಗ ರಚಿಸಿದ್ದರು. ತಮ್ಮ ಮನೆಯಲ್ಲಿ ಗುರುಕುಲ ಮಾದರಿಯಲ್ಲಿ ಶಿಕ್ಷಣ ನೀಡುವುದರ ಜೊತೆಗೆ ಯುಗಪುರುಷ ಸಹಿತ ಮೂರು ದೇವಸ್ಥಾನಗಳಿಗೆ ರಥವನ್ನು ನೀಡಿ ಕೊಡು ಗೈದಾನಿಯಾಗಿ ಜನಾನುರಾಗಿಯಾಗಿದ್ದರು. ಅವರ ಸಾಧನೆಯನ್ನು ಗುರುತಿಸಿ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಚಂದ್ರಶೇಖರ ಸ್ವಾಮೀಜಿಯವರು ಗೌರವಿಸಿದ್ದರು.

ಅವರ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ,ವೇ.ಮೂ.ವಾದಿರಾಜ ಉಪಾಧ್ಯಾಯ ಕೊಲಕಾಡಿ, ವಿದ್ವಾನ್ ಪಂಜ ಭಾಸ್ಕರ್ ಭಟ್, ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು,ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯ ಚಂದ್ರ,ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ ಯುಗಪುರುಷ, ಉದ್ಯಮಿ ಅರವಿಂದ ಪೂಂಜ ಕಾರ್ನಾಡ್, ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಮಯ್ಶದ್ದಿ ಪಕ್ಷಿಕೆರೆ, ಉದ್ಯಮಿ ಪಟೇಲ್ ವಾಸುದೇವ ರಾವ್ ಪುನರೂರು, ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು, ಪುನರ್ ವಿಪ್ರಸಂಪದ ಅಧ್ಯಕ್ಷ ಸುಧಾಕರ್ ರಾವ್, ಮುಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮುಲ್ಕಿ ಜಿಎಸ್‌ಬಿ ಸಭಾದ ಅತುಲ್ ಕುಡ್ವ ,ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ಮಾಜೀ ಅಧ್ಯಕ್ಷ ಗೋಪಿನಾಥ ಪಡಂಗ , , ಮುಲ್ಕಿ ವಿಜಯ ರೈತ ಸೇವಾ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ ನ ಗೌರವಾಧ್ಯಕ್ಷ ವೆಂಕಟೇಶ್ ಹೆಬ್ಬಾರ್,ಅತಿಕಾರಿ ಬೆಟ್ಟು ಗ್ರಾಪಂ ಉಪಾಧ್ಯಕ್ಷ ಮನೋಹರ ಕೋಟ್ಯಾನ್ , ಮುಲ್ಕಿ ನ.ಪಂ ಮಾಜೀ ಅಧ್ಯಕ್ಷ ಸುಭಾಶ್ ಶೆಟ್ಟಿ, ಸದಸ್ಯ ಹರ್ಷ ರಾಜ ಶೆಟ್ಟಿ, ಸತೀಶ್ ಅಂಚನ್, ಯೋಗೀಶ್ ಕೋಟ್ಯಾನ್,ಪುತ್ತು ಬಾವ, ಮುಲ್ಕಿ ನ.ಪಂ.ಮುಖ್ಯಾಧಿಕಾರಿ ಇಂದು ಎಂ,ಮಾಜೀ ಅಧ್ಯಕ್ಷ ಸುನಿಲ್ ಆಳ್ವ, ಮಾಜೀ ಸದಸ್ಯ ಉಮೇಶ್ ಮಾನಂಪಾಡಿ, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್,ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಶೀತಲ್ ಸುಶೀಲ್,ಹಿಂದೂ ಯುವ ಸೇನೆ ಮುಲ್ಕಿ ಘಟಕದ ಅಧ್ಯಕ್ಷ ದಿನೇಶ್ ಕೊಲ್ನಾಡ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಜೆಡಿಎಸ್ ಪಕ್ಷದ ಮುಲ್ಕಿ ಘಟಕದ ನವೀನ್ ಪುತ್ರನ್, ಡಾ. ಹರಿಶ್ಚಂದ್ರ ಪಿ.ಸಾಲ್ಯಾನ್, ಶಶಿಂದ್ರ ಸಾಲ್ಯಾನ್, ಕಂಬಳ ಸಮಿತಿ ಅಧ್ಯಕ್ಷ ಕಿರಣ್ ಶೆಟ್ಟಿ ಕೋಲ್ನಾಡು ಗುತ್ತು,ಉದಯಕುಮಾರ್ ಶೆಟ್ಟಿ ಅಧಿಧನ್ ಮುಲ್ಕಿ , ಉದ್ಯಮಿ ಶಿವರಾಮ್ ಜಿ ಅಮೀನ್, ಕಿಶೋರ್ ಶೆಟ್ಟಿ ಬಪ್ಪನಾಡು, ಗೌತಮ್ ಜೈನ್ ಮುಲ್ಕಿ ಅರಮನೆ, ರಾಘವೇಂದ್ರ ರಾವ್ ಕೆರೆ ಕಾಡು, ಶಂಕರ್ ಪಡಂಗಮುಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಶೆಟ್ಟಿ, ಸದಸ್ಯರಾದ ಪುನೀತ್ ಕೃಷ್ಣ, ಹರೀಶ್ ಹೆಜ್ಮಾಡಿ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗುರುಗಳಾದ ಶ ಅಂಗಡಿಮಾರು ಕೃಷ್ಣ ಭಟ್ಟರ ಅಂತ್ಯಕ್ರಿಯೆ 12 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…

6 hours ago

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…

6 hours ago

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…

6 hours ago

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…

6 hours ago

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…

6 hours ago

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…

6 hours ago