ಆಟೋರಿಕ್ಷಾಕ್ಕೆ ಓಮ್ಮಿ ಡಿಕ್ಕಿ ಹೊಡೆದು ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ
ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ನ. 5ರಂದು ರಾತ್ರಿ ಸಂಭವಿಸಿದೆ.

ಜಾಲ್ಲೂರಿನಿಂದ ಸುಳ್ಯಕ್ಕೆ ಪ್ರಯಾಣಿಕರೋರ್ವರನ್ನು ಬಿಟ್ಟು ಹಿಂತಿರುಗುತ್ತಿದ್ದ ಜಾಲ್ಲೂರು ಗ್ರಾಮದ
ಅರಿಯಡ್ಕದ ಬಾಬು ಪಾಟಾಳಿ ಎಂಬವರು ಚಲಾಯಿಸುತ್ತಿದ್ದ ಅಟೋರಿಕ್ಷಾ ಬರುತ್ತಿದ್ದ ಓಮ್ಮಿಗೆ
ಢಿಕ್ಕಿ ಹೊಡೆದಿದ್ದು, ಚಾಲಕ ಬಾಬು ಪಾಟಾಳಿ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.



