ಜನ ಮನದ ನಾಡಿ ಮಿಡಿತ

Advertisement

ಪುತ್ತಿಗೆ ಪರ್ಯಾಯ ಮಹೋತ್ಸವ: ಹೊರೆ ಕಾಣಿಕೆ‌ ಸಮಿತಿ ಸಭೆ


ಉಡುಪಿ: ಜನವರಿಯಲ್ಲಿ ನಡೆಯಲಿರುವ ಪುತ್ತಿಗೆ ಮಠದ ಪರ್ಯಾಯ‌ ಮಹೋತ್ಸವದ ಹೊರೆಕಾಣಿಕೆ ಸಮಿತಿ ಸಭೆ ಪುತ್ತಿಗೆ ಮಠದ ಸಭಾಂಗಣದಲ್ಲಿ ಭಾನುವಾರ ನಡೆಯಿತು.


ಹೊರೆಕಾಣಿಕೆ ಸಮಿತಿಯ ಸಂಚಾಲಕ ಬೈಕಾಡಿ ಸುಪ್ರಸಾದ್ ಶೆಟ್ಟಿ ಮಾತನಾಡಿ, ಪುತ್ತಿಗೆ ಶ್ರೀಗಳ ಪರ್ಯಯಾ ಮಹೋತ್ಸವ ವನ್ನು ವಿಜೃಂಭಣೆಯಿಂದ ನಡೆಸುವ ಹಿನ್ನೆಲೆಯಲ್ಲಿ ಹೊರಕಾಣಿಕೆ ಮೆರವಣಿಗೆಯನ್ನು ಅದ್ದೂರಿಯಾಗಿ ನಡೆಸಲು ಚಿಂತನೆ ನಡೆಸಲಾಗಿದೆ ಎಂದರು. ಸುಮಾರು 50 ಭಾಗದಲ್ಲಿ ಹೊರೆಕಾಣಿಕೆ ಸಮಿತಿಯನ್ನು ಮಾಡಲಿದ್ದೇವೆ. ಅಲ್ಲಲ್ಲಿ ಸಭೆಗಳನ್ನು ನಡೆಸಿ ಹೊರೆಕಾಣಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಮಾರ್ಗದರ್ಶನ ನೀಡಲಾಗುತ್ತಿದೆ. ಪುತ್ತಿಗೆ ಶ್ರೀಗಳು ವಿದೇಶದಲ್ಲಿ ಕೂಡ ಮಠಗಳನ್ನು ಸ್ಥಾಪಿಸಿ ನಮ್ಮ ಧರ್ಮ ಸಂಸ್ಕೃತಿಯನ್ನು ಪ್ರಸಿದ್ಧಿ ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಈ ಇದೊಂದು ವಿಶ್ವಮಟ್ಟದ ಪರ್ಯಾಯವಾಗಿದ್ದು, ನಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲಿದ್ದೇವೆ ಎಂದು ಹೇಳಿದರು.
ಸಮಿತಿಯ ಪ್ರಧಾನ‌ ಕಾರ್ಯದರ್ಶಿ ಬೆಳಪು ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಉಭಯ ಜಿಲ್ಲೆಯ ಸಹಕಾರಿಗಳು ಸೇರಿ ಉತ್ತಮ ರೀತಿಯಲ್ಲಿ ಹೊರೆಕಾಣಿಕೆ ನೀಡಬೇಕೆಂದು ಮನವಿ ಮಾಡಿದ್ದೇವೆ. ಬೇರೆ ಬೇರೆ ಸಂಸ್ಥೆಗಳಿಗೆ ಎಲ್ಲ ಮಾಹಿತಿ ನೀಡಿದ್ದು, ಹೊರೆಕಾಣಿಕೆ ಮೆರವಣಿಗೆಯ ಬಗ್ಗೆಯೂ ಮಾಹಿತಿ ನೀಡಲಾಗುತ್ತಿದೆ. ಅದೊಂದು ನಾಡ ಹಬ್ಬದ ರೀತಿಯಲ್ಲಿ ನಡೆಯಲಿದೆ. ಸರಕಾರದ ವತಿಯಿಂದ ವಹಿಸಬೇಕಾದ ಜವಾಬ್ದಾರಿಯ ಬಗ್ಗೆಯೂ ಜಿಲ್ಲಾಧಿಕಾರಿ ಗಳ ನೇತೃತ್ವದಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.


ಸಭೆಯಲ್ಲಿ ಆನೆಗುಡ್ಡೆ ವಿನಾಯಕ ದೇವಸ್ಥಾನ ಮ್ಯಾನೆಜಿಂಗ್ ಟ್ರಸ್ಟಿ ಕೆ.ಶ್ರೀ ರಮಣ ಉಪಾಧ್ಯಾಯ, ಕೃಷ್ಣಮೂರ್ತಿ ಆಚಾರ್ಯ, ಅಮೃತಾ ಕೃಷ್ಣಮೂರ್ತಿ, ಯೋಗೀಶ್ ಶೆಟ್ಟಿ, ಅಂಡಾರು ದೇವಿಪ್ರಸಾದ್ ಶೆಟ್ಟಿ, ಬ್ರಾಹ್ಮಣ ಸಭಾದ ಮಂಜುನಾಥ ಉಪಾಧ್ಯ, ಶ್ರೀಕಾಂತ ನಾಯಕ್, ಶಶಿಕಾಂತ್ ಪಡುಬಿದ್ರಿ, ಜ್ಯೋತಿ ದೇವಾಡಿಗ, ಮಾತೃ ಮಂಡಳಿಯ ಪದ್ಮಾ, ಶ್ರೀಕಾಂತ್ ಸಿದ್ದಾಪುರ, ಉದಯ್ ಮಠದಬೆಟ್ಟು, ಕೃಷ್ಣ ರಾವ್ ಕೊಡಂಚ, ಬಾಸ್ಕರ್ ರಾವ್ ಕಿದಿಯೂರು, ಏಲ್.ಎನ್.ಹೆಗ್ಡೆ, ರಾಘವೇಂದ್ರ ಕಿಣಿ, ರಾಘವೇಂದ್ರ ಭಟ್ ಕನರ್ಪಾಡಿ, ರಘುಪತಿ ರಾವ್, ಚೈತನ್ಯ ಮತ್ತಿತರರು ಉಪಸ್ಥಿತರಿದ್ದರು.


ನಾಗರಾಜ್ ಆಚಾರ್ಯ ಸ್ವಾಗತಿಸಿ, ವಿಜಯ ರಾಘವ ವಂದಿಸಿದರು. ರವೀಂದ್ರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ…!

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

error: Content is protected !!