ಉಡುಪಿ: ಜನವರಿಯಲ್ಲಿ ನಡೆಯಲಿರುವ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವದ ಹೊರೆಕಾಣಿಕೆ ಸಮಿತಿ ಸಭೆ ಪುತ್ತಿಗೆ ಮಠದ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಹೊರೆಕಾಣಿಕೆ ಸಮಿತಿಯ ಸಂಚಾಲಕ ಬೈಕಾಡಿ ಸುಪ್ರಸಾದ್ ಶೆಟ್ಟಿ ಮಾತನಾಡಿ, ಪುತ್ತಿಗೆ ಶ್ರೀಗಳ ಪರ್ಯಯಾ ಮಹೋತ್ಸವ ವನ್ನು ವಿಜೃಂಭಣೆಯಿಂದ ನಡೆಸುವ ಹಿನ್ನೆಲೆಯಲ್ಲಿ ಹೊರಕಾಣಿಕೆ ಮೆರವಣಿಗೆಯನ್ನು ಅದ್ದೂರಿಯಾಗಿ ನಡೆಸಲು ಚಿಂತನೆ ನಡೆಸಲಾಗಿದೆ ಎಂದರು. ಸುಮಾರು 50 ಭಾಗದಲ್ಲಿ ಹೊರೆಕಾಣಿಕೆ ಸಮಿತಿಯನ್ನು ಮಾಡಲಿದ್ದೇವೆ. ಅಲ್ಲಲ್ಲಿ ಸಭೆಗಳನ್ನು ನಡೆಸಿ ಹೊರೆಕಾಣಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಮಾರ್ಗದರ್ಶನ ನೀಡಲಾಗುತ್ತಿದೆ. ಪುತ್ತಿಗೆ ಶ್ರೀಗಳು ವಿದೇಶದಲ್ಲಿ ಕೂಡ ಮಠಗಳನ್ನು ಸ್ಥಾಪಿಸಿ ನಮ್ಮ ಧರ್ಮ ಸಂಸ್ಕೃತಿಯನ್ನು ಪ್ರಸಿದ್ಧಿ ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಈ ಇದೊಂದು ವಿಶ್ವಮಟ್ಟದ ಪರ್ಯಾಯವಾಗಿದ್ದು, ನಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲಿದ್ದೇವೆ ಎಂದು ಹೇಳಿದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ಬೆಳಪು ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಉಭಯ ಜಿಲ್ಲೆಯ ಸಹಕಾರಿಗಳು ಸೇರಿ ಉತ್ತಮ ರೀತಿಯಲ್ಲಿ ಹೊರೆಕಾಣಿಕೆ ನೀಡಬೇಕೆಂದು ಮನವಿ ಮಾಡಿದ್ದೇವೆ. ಬೇರೆ ಬೇರೆ ಸಂಸ್ಥೆಗಳಿಗೆ ಎಲ್ಲ ಮಾಹಿತಿ ನೀಡಿದ್ದು, ಹೊರೆಕಾಣಿಕೆ ಮೆರವಣಿಗೆಯ ಬಗ್ಗೆಯೂ ಮಾಹಿತಿ ನೀಡಲಾಗುತ್ತಿದೆ. ಅದೊಂದು ನಾಡ ಹಬ್ಬದ ರೀತಿಯಲ್ಲಿ ನಡೆಯಲಿದೆ. ಸರಕಾರದ ವತಿಯಿಂದ ವಹಿಸಬೇಕಾದ ಜವಾಬ್ದಾರಿಯ ಬಗ್ಗೆಯೂ ಜಿಲ್ಲಾಧಿಕಾರಿ ಗಳ ನೇತೃತ್ವದಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಸಭೆಯಲ್ಲಿ ಆನೆಗುಡ್ಡೆ ವಿನಾಯಕ ದೇವಸ್ಥಾನ ಮ್ಯಾನೆಜಿಂಗ್ ಟ್ರಸ್ಟಿ ಕೆ.ಶ್ರೀ ರಮಣ ಉಪಾಧ್ಯಾಯ, ಕೃಷ್ಣಮೂರ್ತಿ ಆಚಾರ್ಯ, ಅಮೃತಾ ಕೃಷ್ಣಮೂರ್ತಿ, ಯೋಗೀಶ್ ಶೆಟ್ಟಿ, ಅಂಡಾರು ದೇವಿಪ್ರಸಾದ್ ಶೆಟ್ಟಿ, ಬ್ರಾಹ್ಮಣ ಸಭಾದ ಮಂಜುನಾಥ ಉಪಾಧ್ಯ, ಶ್ರೀಕಾಂತ ನಾಯಕ್, ಶಶಿಕಾಂತ್ ಪಡುಬಿದ್ರಿ, ಜ್ಯೋತಿ ದೇವಾಡಿಗ, ಮಾತೃ ಮಂಡಳಿಯ ಪದ್ಮಾ, ಶ್ರೀಕಾಂತ್ ಸಿದ್ದಾಪುರ, ಉದಯ್ ಮಠದಬೆಟ್ಟು, ಕೃಷ್ಣ ರಾವ್ ಕೊಡಂಚ, ಬಾಸ್ಕರ್ ರಾವ್ ಕಿದಿಯೂರು, ಏಲ್.ಎನ್.ಹೆಗ್ಡೆ, ರಾಘವೇಂದ್ರ ಕಿಣಿ, ರಾಘವೇಂದ್ರ ಭಟ್ ಕನರ್ಪಾಡಿ, ರಘುಪತಿ ರಾವ್, ಚೈತನ್ಯ ಮತ್ತಿತರರು ಉಪಸ್ಥಿತರಿದ್ದರು.
ನಾಗರಾಜ್ ಆಚಾರ್ಯ ಸ್ವಾಗತಿಸಿ, ವಿಜಯ ರಾಘವ ವಂದಿಸಿದರು. ರವೀಂದ್ರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…