ಉಡುಪಿ: ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರವರು ಬೆಂಗಳೂರಿನಲ್ಲಿ ಭೇಟಿಯಾಗಿ ಜಿಲ್ಲೆಯ ಅಸಂಘಟಿತ ಕಾರ್ಮಿಕರಾದ ಚಿನ್ನ ಬೆಳ್ಳಿ ಕುಶಲಕರ್ಮಿಗಳು, ವಿಶ್ವಕರ್ಮ ಸಮುದಾಯದ ಬಡಗಿ, ಕಮ್ಮಾರ ವೃತ್ತಿ, ಟೈಲರ್,ಆಟೋ ಚಾಲಕರು, ಮೀನುಗಾರಿಕಾ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಸಮಾಲೋಚನೆ ನಡೆಸಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಇತ್ತೀಚಿನ ದಿನಗಳಲ್ಲಿ ಕರಾವಳಿ ಜಿಲ್ಲೆಯಾದ್ಯಂತ ಬಂಡವಾಳಶಾಹಿ ಕಾರ್ಪೊರೇಟ್ ವ್ಯವಸ್ಥೆಯ ಚಿನ್ನಾಭರಣ ಸಂಸ್ಥೆಗಳು ಹೊರ ರಾಜ್ಯದ ಕಾರ್ಮಿಕರಿಂದ ಆಭರಣಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದು, ಜಿಲ್ಲೆಯ ಸ್ಥಳೀಯ ಕುಶಲಕರ್ಮಿಗಳಿಗೆ ಅವಕಾಶ ನೀಡದೆ ಸಂಕಷ್ಟ ಎದುರಿಸುವಂತಾಗಿದೆ.
ಅಸಂಘಟಿತ ಕಾರ್ಮಿಕರು ಸರಕಾರದಿಂದ ನೀಡುವ ಸೌಲಭ್ಯದಿಂದ ವಂಚಿತರಾಗಿದ್ದು, ಆರೋಗ್ಯ ವಿಮೆ, ಮಕ್ಕಳ ವಿದ್ಯಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನ, ಕಡಿಮೆ ಬಡ್ಡಿದರದಲ್ಲಿ ಸಾಲ ಯೋಜನೆ, ಇ ಎಸ್ ಐ ಸೌಲಭ್ಯ, ಕೌಶಲ್ಯ ತರಬೇತಿ ಕಾರ್ಯಕ್ರಮಗಳು, ಪಿಂಚಣಿ ಯೋಜನೆಗಳ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಸಚಿವರಿಗೆ ಮನವಿ ಮಾಡಿದರು.
ಶೀಘ್ರದಲ್ಲಿಯೇ ಚಿನ್ನ ಬೆಳ್ಳಿ ಕುಶಲಕರ್ಮಿಗಳು, ವಿಶ್ವಕರ್ಮ ಸಮುದಾಯ ಹಾಗೂ ಟೈಲರ್ ಅಸೋಸಿಯೇಶನ್, ಆಟೋ ಚಾಲಕರ ಸಂಘ, ಮೀನುಗಾರಿಕಾ ಕಾರ್ಮಿಕರ ನಿಯೋಗದೊಂದಿಗೆ ವಿವಿಧ ಬೇಡಿಕೆಗಳ ಬಗ್ಗೆ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಲು ಅವಕಾಶ ನೀಡುವಂತೆ ಕೋರಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…