ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ (26) ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ನೆಹರೂ ನಗರ ಜಂಕ್ಷನ್‌ನಲ್ಲಿ ಅಟ್ಟಾಡಿಸಿಕೊಂಡು ಹೋಗಿ ಕಡಿದು ಹತ್ಯೆ ಮಾಡಲಾಗಿದ್ದು, ಅಕ್ಷಯ್ ಕಲ್ಲೇಗ ಪುತ್ತೂರಿನಲ್ಲಿ ಇದ್ದಾಗ ಆಗಮಿಸಿದ ತಂಡಯೊಂದು ಯದ್ವಾತದ್ವ ತಲವಾರ್‌ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ.
ವಿವೇಕಾನಂದ ಕಾಲೇಜ್ ಬಳಿ ನಿವಾಸಿಯಾಗಿದ್ದು, ತಂದೆ ಚಂದ್ರಶೇಖರ, ತಾಯಿ ಕುಸುಮ, ಇಬ್ಬರು ಸಹೋದರರನ್ನು ಅಗಲಿದ್ದಾರೆ. ಕಳೆದ 6 ವರ್ಷಗಳಿಂದ ಕಲ್ಲೇಗ ಟೈಗರ್ಸ್ ಎಂಬ ಹುಲಿ ವೇಷ ತಂಡವನ್ನು ಅವರು ಮುನ್ನಡೆಸುತ್ತಿದ್ದರು. ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್ ಹಾಗೂ ಕೃತ್ಯ ಎಸಗಿದ ತಂಡದ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಅದುವೇ ಸೇಡಾಗಿ ಪರಿಣಮಿಸಿದ ಕಾರಣ ಅಕ್ಷಯ್ ನನ್ನು ನೆಹರೂ ನಗರಕ್ಕೆ ಬರಲು ಹೇಳಿ ಹತ್ಯೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ನೆಹರೂ ನಗರದಿಂದ ವಿವೇಕಾನಂದ ಕಾಲೇಜಿಗೆ ತೆರಳುವ ರಸ್ತೆಯಲ್ಲಿ ಹೆದ್ದಾರಿಯ ಸ್ವಲ್ಪ ದೂರದಲ್ಲಿರುವ ಕೆನಾರ ಬ್ಯಾಂಕಿನ ಎಟಿಎಂ ಬಳಿ ಅಕ್ಷಯ್ ಮೇಲೆ ತಂಡ ದಾಳಿ ನಡೆಸಿದ್ದು, ಅಲ್ಲಿಂದ ಆತನನ್ನು ಬೆನ್ನಟ್ಟಿಕೊಂಡು ಬಂದು ತಲವಾರಿನಿಂದ ದಾಳಿ ನಡೆಸಿದ್ದಾರೆ.
ಎಟಿಎಂ ಬಳಿಯಿಂದ ಮಾಣಿ ಮೈಸೂರು ಹೆದ್ದಾರಿಯನ್ನು ದಾಟಿ ಇನ್ನೊಂದು ಬದಿಯಲ್ಲಿ ಗಿಡ ಮರಗಳಿಂದ ತುಂಬಿದ್ದ ಜಾಗದವರೆಗೂ ಬೆನ್ನಟ್ಟಿ ಹೋಗಿ ಹತ್ಯೆ ನಡೆಸಿರುವುದು ಕಂಡು ಬಂದಿದೆ. ಈ ಕೃತ್ಯವು ರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ ಎಂದು ತಿಳಿದು ಬಂದಿದೆ. ಇನ್ನು ಕೃತ್ಯ ನಡೆದ ಕೆಲ ಗಂಟೆಯ ಬಳಿಕ ಮನೀಶ್ ಹಾಗೂ ಚೇತು ಎಂಬವರು ಪೊಲೀಸರಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದ್ದು, ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಉಳಿದ ಆರೋಪಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಡಿವೈಎಸ್ಪಿ ಸಹಿತ ಪೊಲೀಸರು ಭೇಟಿ ನೀಡಿದ್ದು, ಬಂದೋಬಸ್ತ್ ಏರ್ಪಡಿಸಲಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಭೇಟಿ ನೀಡಿ ಮಹಜರು ನಡೆಸುತ್ತಿದ್ದಾರೆ. ಮೃತ ದೇಹವನ್ನು ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಸಂಜೆ ವೇಳೆ ವಾಹನ ಅಪಘಾತದ ವಿಚಾರದಲ್ಲಿ ಅಕ್ಷಯ್ ಹಾಗೂ ಎದುರಾಳಿ ತಂಡದ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಅಪಘಾತದ ನಷ್ಟ ಸರಿಪಡಿಸಿಕೊಳ್ಳಲು ಮಾತನಾಡಲೆಂದು : ಅದೇ ತಂಡ ಅಕ್ಷಯ್ ನನ್ನು ರಾತ್ರಿ ವೇಳೆ ನೆಹರೂ ನಗರ ಬಳಿ ಕರೆದು ಕೃತ್ಯ ಎಸಗಿದೆ ಎನ್ನಲಾಗುತ್ತಿದೆ.
ಒಂದೆರಡು ಸಾವಿರ ರೂಪಾಯಿ ವಿಚಾರವಾಗಿ ಈ ಕೃತ್ಯ ನಡೆದಿದೆಯೇ ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲಿ ಶಂಕೆ ವ್ಯಕ್ತವಾಗುತ್ತಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…