ಮಕ್ಕಳ ಕಲಾಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕವು ಮಕ್ಕಳಿಗಾಗಿ ಕಲೆ ಸಾಹಿತ್ಯ ಚಟುವಟಿಕೆಗಳಲ್ಲಿ ತನ್ನನ್ನು ವಿಪುಲವಾಗಿ ತೊಡಗಿಸಿಕೊಂಡಿರುವವರಿಗೆ ಪ್ರತಿ ವರ್ಷ ನೀಡುವ ತಾಲೂಕು ಮಟ್ಟದ ಬಾಲಬಂಧು ಪುರಸ್ಕಾರಕ್ಕೆ ಬಾರಿ ರಾಜೇಶ ವಿಟ್ಲ ಆಯ್ಕೆಯಾಗಿದ್ದಾರೆ.
ವಿಟ್ಲದ ಆರ್.ಕೆ. ಕಲಾ ಸಂಸ್ಥೆಯ ಸಹಪ್ರವರ್ತಕರಾಗಿರುವ ರಾಜೇಶ್ ವಿಟ್ಲ ತನ್ನ ಕಲಾ ವೃತ್ತಿ ಬದುಕಿನೊಂದಿಗೆ ಮಕ್ಕಳಿಗಾಗಿ ಬಂಟ್ವಾಳ ತಾಲೂಕಿನ ವಿವಿಧ ಶಾಲೆಗಳಲ್ಲಿ ರಜಾ ಶಿಬಿರಗಳನ್ನು ಸಂಘಟಿಸಿ, ಮಕ್ಕಳಲ್ಲಿ ಕಲೆ ಸಾಹಿತ್ಯವನ್ನು ಚಿಗುರಿಸುವ ಸೇವಾ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂಬುದನ್ನು ಗುರುತಿಸಿ ಬಾಲಬಂಧು ಪುರಸ್ಕಾರಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ.
ಕಡೇಶಿವಾಲಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನೇತೃತ್ವದಲ್ಲಿ ದಿನಾಂಕ 06-12-2023 ರಂದು ಜರಗಲಿರುವ 17ನೇ ವರ್ಷದ ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ, ಸಮಾರೋಪ ಸಮಾರಂಭದಲ್ಲಿ ರಾಜೇಶ ವಿಟ್ಲ ಅವರನ್ನು ಸನ್ಮಾನಿಸಿ, ಬಂಟ್ವಾಳ ತಾಲೂಕು ಮಟ್ಟದ ಬಾಲಬಂಧು ಪುರಸ್ಕಾರವನ್ನುಪ್ರದಾನ ಮಾಡಲಾಗುವುದು ಎಂದು ಮಕ್ಕಳ ಕಲಾ ಲೋಕದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ತಿಳಿಸಿರುತ್ತಾರೆ
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…