ಮೂಡುಬಿದಿರೆ: ತುಳು ರಂಗಭೂಮಿಯಲ್ಲಿ ವಿಭಿನ್ನವಾದ ನಾಟಕಗಳು ಬಂದಿವೆ. ಇದೀಗ ಪಿಂಗಾರ ಕಲಾವಿದೆರ್ ತಂಡದ ‘ಕದಂಬ’ ನಾಟಕವು ಶೀರ್ಷಿಕೆಯು ವಿಶಿಷ್ಟ ಮತ್ತು ಕುತೂಹಲವಾಗಿದ್ದು ಇದು ನಾಟಕ ರಂಗದಲ್ಲಿ ಬದಲಾವಣೆಯ ಗಾಳಿ ಬೀಸುವಂತೆ ಮಾಡಿದೆ ಈ ನಾಟಕವು ತುಳು ರಂಗಭೂಮಿಗೆ ಮೈಲುಗಲ್ಲಾಗಲಿ ಎಂದು ಹಿರಿಯ ರಂಗ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಹೇಳಿದರು.
ಅವರು ಮಣಿ ಕೋಟೆಬಾಗಿಲು ಅವರ ನಿರ್ದೇಶನದ 8 ನೇ ನಾಟಕ ‘ಕದಂಬ”ವು ಕನ್ನಡ ಭವನದಲ್ಲಿ ನಡೆದ ಪ್ರಥಮ ಪ್ರದರ್ಶನದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ಅಲಂಗಾರು ಶ್ರೀ ಬಡಗು ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಮಾತನಾಡಿ ತುಳು ನಾಟಕದ ಮೂಲಕ ಧಾರ್ಮಿಕ ಮತ್ತು ಸಾಮಾಜಿಕವಾಗಿ ಜನರಿಗೆ ಉತ್ತಮ ಸಂದೇಶವನ್ನು ನೀಡುತ್ತಾ ತುಳು ಭಾಷೆಯನ್ನು ಉಳಿಸಿ ಬೆಳೆಸುವಂತಹ ಕೆಲಸವನ್ನು ಮಣಿ ಕೋಟೆಬಾಗಿಲು ಮಾಡುತ್ತಿರುವುದು ಶ್ಲಾಘನೀಯ.
ಉದ್ಯಮಿ ರವೀಂದ್ರ ಶೆಟ್ಟಿ ಬಜಗೋಳಿ ಮಾತನಾಡಿ ಮಣಿ ಅವರ ನಾಟಕಗಳಲ್ಲಿ ಸಾಮಾಜಿಕ ಸುಧಾರಣೆಯ ಸಂದೇಶ ಇರುತ್ತದೆ ಎಂದರು.
ಮಾಜಿ ಸಚಿವ ಅಭಯಚಂದ್ರ ಜೈನ್, ಉದ್ಯಮಿ ಶ್ರೀಪತಿ ಭಟ್, ಸತ್ಯಪ್ರಕಾಶ್ ಹೆಗ್ಡೆ, ಸತೀಶ್ ಕಾಶಿಪಟ್ಣ, ಕೋಟೆಬಾಗಿಲು ಮಹಮ್ಮಾಯಿ ದೇವಸ್ಥಾನದ ಗೌರವ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಸತೀಶ್ ಹೊಸ್ಮಾರು ಕಾರ್ಯಕ್ರಮ ನಿರೂಪಿಸಿದರು. ನಾಟಕದ ರಚನೆಗಾರ ಮಣಿ ಕೋಟೆಬಾಗಿಲು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…