ಉಡುಪಿ: ಪ್ರಾಥಮಿಕ ಆರೋಗ್ಯ ಕೇಂದ್ರ ಪಡುಬಿದ್ರಿ ಇದರ ಆರೋಗ್ಯ ರಕ್ಷಾ ಸಮಿತಿ ಸಭೆ ಇಂದು ನಡೆಯಿತು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ, ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಪಂ ಅಧ್ಯಕ್ಷ ಶಶಿಕಲಾ, ಜಿಪಂ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ, ತಾಪಂ ಮಾಜಿ ಅಧ್ಯಕ್ಷೆ ನೀತಾ ಗುರುರಾಜ್, ಪ್ರಕಾಶ್ ಪಾದೆಬೆಟ್ಟು, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜಶ್ರೀ ಹಾಗೂ ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.



