ಕಾರ್ಕಳ: ನಂದಳಿಕೆ ಗ್ರಾಮದ ಮಾವಿನಕಟ್ಟೆ ದರ್ಕಾಸು ನಿವಾಸಿ ದೀಪಾ (21) ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಲಾಗಿದೆ.

ನ.6 ರಂದು ಬೆಳಗ್ಗೆ ಕಾಲೇಜಿಗೆ ಹೋದ ದೀಪಾ ನಂತರ ಮನೆಗೆ ವಾಪಸ್ಸಾಗಿರಲಿಲ್ಲ. ಸಂಬಂಧಿಕರ ಮನೆಗಳಲ್ಲಿ ಪತ್ತೆಯಾಗದ ಕಾರಣ ಆಕೆಯ ಸಹೋದರ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೀಪಾ ನೀಲಿ ಬಣ್ಣದ ಚೂಡಿದಾರ್ ಧರಿಸಿದ್ದಾರೆ. ದೀಪಾ ಎಲ್ಲಿಯಾದರೂ ಕಂಡುಬಂದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.



