ಮುಲ್ಕಿ: ಕರ್ನಾಟಕ ಕಂಡ ಶ್ರೇಷ್ಠ ಸಂಸದೀಯ ಪಟುಗಳಲ್ಲಿ ,ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡರಾಗಿದ್ದು ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಹಾಗೂ ಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಬಹಳಷ್ಟು ಸಾಧನೆಗಳನ್ನು ಮಾಡಿದ್ದರು ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು. ಅವರು ತಮ್ಮ ಆಶ್ರಮದಲ್ಲಿ ದಿ. ಡಿ ಬಿ ಚಂದ್ರೇಗೌಡರಿಗೆ ನುಡಿ ನಮನ ಸಲ್ಲಿಸಿ ಮಾಧ್ಯಮದ ಜೊತೆ ಮಾತನಾಡಿ ಡಿ ಬಿ ಚಂದ್ರೇಗೌಡ ಜೊತೆಗಿನ ತಮ್ಮ ಒಡನಾಟಗಳನ್ನು ಸ್ಮರಿಸಿಕೊಂಡು ತಮ್ಮ ದೈನಂದಿನ ಜೀವನದಲ್ಲಿ ಜನತೆಯ ಪ್ರತಿಯೊಂದು ಕಷ್ಟ ಸುಖಗಳಲ್ಲಿ ಭಾಗಿಯಾಗುತ್ತಿದ್ದರು ಅವರು ಅಜಾತಶತ್ರುವಾಗಿದ್ದರು ಎಂದು ಬಣ್ಣಿಸಿದ್ದಾರೆ.
ಸಂಸದ ಡಿ ಬಿ ಚಂದ್ರೇಗೌಡ ನಿಧನಕ್ಕೆ ಮುಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್,ಮಾಜೀ ಸಚಿವ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ , ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಉದ್ಯಮಿ ಅರವಿಂದ ಪೂಂಜ ಕಾರ್ನಾಡ್,
ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಪುನೀತ್ ಕೃಷ್ಣ, ಗುರುಪ್ರಸಾದ್ ಭಟ್ ಮುಂಡ್ಕೂರು, ಗೌತಮ್ ಜೈನ್ ಮುಲ್ಕಿ ಅರಮನೆ, ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ ನ ಸ್ಥಾಪಕ ಅಧ್ಯಕ್ಷ ವೆಂಕಟೇಶ್ ಹೆಬ್ಬಾರ್, ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…