ಜನ ಮನದ ನಾಡಿ ಮಿಡಿತ

Advertisement

ನವೆಂಬರ್ 11 : ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್‌ನ 15ನೇ ವರ್ಷದ ಶ್ರೀ ವಿನಾಯಕ ಯಕ್ಷಕಲೋತ್ಸವ-2023 ಸಂಭ್ರಮ


ಮಂಗಳೂರು: ಕಳೆದ 15 ವರ್ಷದಿಂದ ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್‌ನ ಮೂಲಕ ಕರಾವಳಿ ಜಿಲ್ಲೆ ಸಹಿತ ಬೆಂಗಳೂರು, ಮೈಸೂರು, ಮುಂಬೈಯಂತಹ ನಗರಗಳಲ್ಲಿ ಯಕ್ಷಗಾನ ಪ್ರದರ್ಶನ ಮಾಡುವ ಪ್ರಭುದ್ಧ ತಂಡವಾಗಿರುವ ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ತಂಡದ 15ನೇ ವರ್ಷದ ಶ್ರೀ ವಿನಾಯಕ ಯಕ್ಷಕಲೋತ್ಸವ-2023 ಸಂಭ್ರಮವು ನವೆಂಬರ್ 11ಕ್ಕೆ ನಡೆಯಲಿದೆ ಎಂದು ಫೌಂಡೇಶನ್‌ನ ಅಧ್ಯಕ್ಷ ಜಯಂತ್ ಅಮೀನ್ ಕೆರೆಕಾಡು ತಿಳಿಸಿದ್ದಾರೆ.


ಅವರು ಕಿನ್ನಿಗೋಳಿಯ ಸ್ವಾಗತ್ ಸಭಾಂಗಣದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಕಾರ್ಯಕ್ರಮವು ಎಸ್‌ಕೋಡಿಯ ಪದ್ಮಾವತಿ ಸಭಾಂಗಣದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರ ಉದ್ಘಾಟನೆಯೊಂದಿಗೆ ಗಣ್ಯರ ಉಪಸ್ಥಿತಿಯೊಂದಿಗೆ ಸಭಾ ಕಾರ್ಯಕ್ರಮ, ಪ್ರಶಸ್ತಿ ಪ್ರದಾನ, ಗೌರವಾರ್ಪಣೆ ಹಾಗೂ ಯಕ್ಷಗಾನ ಪ್ರದರ್ಶನದೊಂದಿಗೆ ನಡೆಯಲಿದೆ ಎಂದರು.


ಮೇಳದ ಸಂಚಾಲಕ ಅಭಿಜಿತ್ ಮಾಹಿತಿ ನೀಡಿ, ಶ್ರೀ ವಿನಾಯಕ ಮೇಳವು ಪ್ರಸ್ತುತ ವರ್ಷದಲ್ಲಿ 70ಕ್ಕೂ ಮಿಕ್ಕಿ ಯಕ್ಷಗಾನ ಪ್ರದರ್ಶನ ನೀಡಿದೆ. ಮುಂಬೈಯ 9ನೇ ವರ್ಷದ ಪ್ರವಾಸವು ಯಶಸ್ವಿಯಾಗಿ ಮುಗಿಸಿದ್ದೇವೆ, ಮುಂದಿನ ದಶಮಾನೋತ್ಸವ ಸಂಭ್ರಮದಲ್ಲಿ ಹತ್ತು ದಿನಗಳ ಕಾಲ ಯಕ್ಷಗಾನ ಪ್ರದರ್ಶನ ನೀಡಲಿದ್ದೇವೆ ಎಂದರು.
ಮೇಳದ ಯಕ್ಷಗುರು ಅಜಿತ್ ಕೆರೆಕಾಡು ಮಾತನಾಡಿ, ಯಕ್ಷಕಲೋತ್ಸವದಲ್ಲಿ ಜಿಲ್ಲೆಯ ಪ್ರಸಿದ್ಧ ಕಲಾವಿದರ ಸಹಿತ ಮೇಳದ 65ಕ್ಕೂ ಮಿಕ್ಕಿ ಕಲಾವಿದರು ಬಣ್ಣ ಹಚ್ಚಲಿದ್ದಾರೆ. ಹಿಮ್ಮೇಳದಲ್ಲಿಯೂ ಕಲಾವಿದರ ಸಂಗಮವಿದೆ. ಪೂರ್ವರಂಗ, ನಂದ ಮುಕುಂದ, ಕರುಣಾಳು ರಾಘವ, ಸಂಭವಾಮಿ ಯುಗೇ ಯುಗೇ, ವಾಸುದೇವ ಸರ್ವಂ ಪ್ರಸಂಗ ಪ್ರದರ್ಶನಗೊಳ್ಳಲಿದೆ ಎಂದರು.
ಸುದ್ಧಿಗೋಷ್ಠಿಯಲ್ಲಿ ಉಪಾಧ್ಯಕ್ಷೆ ಉಷಾ ನರೇಂದ್ರ ಕೆರೆಕಾಡು, ಕಾರ್ಯದರ್ಶಿ ದುರ್ಗಾಪ್ರಸಾದ್, ಸದಸ್ಯರಾದ ಶ್ರೇಯಸ್ ರಾವ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!