ಮಂಗಳೂರು: ಕಳೆದ 15 ವರ್ಷದಿಂದ ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್‌ನ ಮೂಲಕ ಕರಾವಳಿ ಜಿಲ್ಲೆ ಸಹಿತ ಬೆಂಗಳೂರು, ಮೈಸೂರು, ಮುಂಬೈಯಂತಹ ನಗರಗಳಲ್ಲಿ ಯಕ್ಷಗಾನ ಪ್ರದರ್ಶನ ಮಾಡುವ ಪ್ರಭುದ್ಧ ತಂಡವಾಗಿರುವ ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ತಂಡದ 15ನೇ ವರ್ಷದ ಶ್ರೀ ವಿನಾಯಕ ಯಕ್ಷಕಲೋತ್ಸವ-2023 ಸಂಭ್ರಮವು ನವೆಂಬರ್ 11ಕ್ಕೆ ನಡೆಯಲಿದೆ ಎಂದು ಫೌಂಡೇಶನ್‌ನ ಅಧ್ಯಕ್ಷ ಜಯಂತ್ ಅಮೀನ್ ಕೆರೆಕಾಡು ತಿಳಿಸಿದ್ದಾರೆ.
ಅವರು ಕಿನ್ನಿಗೋಳಿಯ ಸ್ವಾಗತ್ ಸಭಾಂಗಣದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಕಾರ್ಯಕ್ರಮವು ಎಸ್‌ಕೋಡಿಯ ಪದ್ಮಾವತಿ ಸಭಾಂಗಣದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರ ಉದ್ಘಾಟನೆಯೊಂದಿಗೆ ಗಣ್ಯರ ಉಪಸ್ಥಿತಿಯೊಂದಿಗೆ ಸಭಾ ಕಾರ್ಯಕ್ರಮ, ಪ್ರಶಸ್ತಿ ಪ್ರದಾನ, ಗೌರವಾರ್ಪಣೆ ಹಾಗೂ ಯಕ್ಷಗಾನ ಪ್ರದರ್ಶನದೊಂದಿಗೆ ನಡೆಯಲಿದೆ ಎಂದರು.
ಮೇಳದ ಸಂಚಾಲಕ ಅಭಿಜಿತ್ ಮಾಹಿತಿ ನೀಡಿ, ಶ್ರೀ ವಿನಾಯಕ ಮೇಳವು ಪ್ರಸ್ತುತ ವರ್ಷದಲ್ಲಿ 70ಕ್ಕೂ ಮಿಕ್ಕಿ ಯಕ್ಷಗಾನ ಪ್ರದರ್ಶನ ನೀಡಿದೆ. ಮುಂಬೈಯ 9ನೇ ವರ್ಷದ ಪ್ರವಾಸವು ಯಶಸ್ವಿಯಾಗಿ ಮುಗಿಸಿದ್ದೇವೆ, ಮುಂದಿನ ದಶಮಾನೋತ್ಸವ ಸಂಭ್ರಮದಲ್ಲಿ ಹತ್ತು ದಿನಗಳ ಕಾಲ ಯಕ್ಷಗಾನ ಪ್ರದರ್ಶನ ನೀಡಲಿದ್ದೇವೆ ಎಂದರು.
ಮೇಳದ ಯಕ್ಷಗುರು ಅಜಿತ್ ಕೆರೆಕಾಡು ಮಾತನಾಡಿ, ಯಕ್ಷಕಲೋತ್ಸವದಲ್ಲಿ ಜಿಲ್ಲೆಯ ಪ್ರಸಿದ್ಧ ಕಲಾವಿದರ ಸಹಿತ ಮೇಳದ 65ಕ್ಕೂ ಮಿಕ್ಕಿ ಕಲಾವಿದರು ಬಣ್ಣ ಹಚ್ಚಲಿದ್ದಾರೆ. ಹಿಮ್ಮೇಳದಲ್ಲಿಯೂ ಕಲಾವಿದರ ಸಂಗಮವಿದೆ. ಪೂರ್ವರಂಗ, ನಂದ ಮುಕುಂದ, ಕರುಣಾಳು ರಾಘವ, ಸಂಭವಾಮಿ ಯುಗೇ ಯುಗೇ, ವಾಸುದೇವ ಸರ್ವಂ ಪ್ರಸಂಗ ಪ್ರದರ್ಶನಗೊಳ್ಳಲಿದೆ ಎಂದರು.
ಸುದ್ಧಿಗೋಷ್ಠಿಯಲ್ಲಿ ಉಪಾಧ್ಯಕ್ಷೆ ಉಷಾ ನರೇಂದ್ರ ಕೆರೆಕಾಡು, ಕಾರ್ಯದರ್ಶಿ ದುರ್ಗಾಪ್ರಸಾದ್, ಸದಸ್ಯರಾದ ಶ್ರೇಯಸ್ ರಾವ್ ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…