ದೀಪಾವಳಿಯ ಪ್ರಯುಕ್ತ ಪ್ರತೀ ವರ್ಷದಂತೆ ಈ ಬಾರಿಯೂ ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನ.೧೩ ರಂದು ಬೆಳಿಗ್ಗೆ6 ಗಂಟೆಯಿ0ದ ವಸ್ತ್ರ ದಾ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದು ಟ್ರಸ್ಟ್ ಪ್ರವರ್ತಕ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.

ಇವರು ಶಾಸಕರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಮಾರು ೧.೭೦ ಕೋಟಿ ವೆಚ್ಚದಲ್ಲಿ ಈ ವಸ್ತçದಾನ ಹಾಗೂ ಅನ್ನಸಂತರ್ಪಣೆ ಕಾರ್ಯ ನಡೆಯಲಿದ್ದು, ಬೆಳಿಗ್ಗೆ ೧೧-೩೦ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಗುರುದೇವಾನಂದ ಸ್ವಾಮೀಜಿ, ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಹರೀಶ್ ಕುಮಾರ್, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ವಿವಿಧ ಧರ್ಮ- ಸಮುದಾಯಗಳ ಮುಖಂಡರು ಭಾಗಿಯಾಗಲಿದ್ದಾರೆ. ಕಳೆದ ವರ್ಷ ೩೫ ಸಾವಿರ ಮಂದಿಗೆ ವಸ್ತçದಾನ ಮಾಡಲಾಗಿದ್ದು, ಈ ಬಾರಿ ಸುಮಾರು ೫೦ ಸಾವಿರ ಮಂದಿಗೆ ವಸ್ತçದಾನ ಮಾಡಲಾಗುವುದು. ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಂದಿಗೆ ಆದ್ಯತೆ ನೀಡಲಾಗುವುದು. ಬೇರೆ ಕಡೆಯಿಂದ ಬರುವ ಮಹಿಳೆಯರಿಗೆ ಸೀರೆ ಹಾಗೂ ಪುರುಷರಿಗೆ ಮತ್ತು ಮಕ್ಕಳಿಗೆ ಬೆಡ್ ಶೀಟ್ ನೀಡಲಾಗುವುದು ಎಂದು ಮಾಹಿತಿ ನೀಡಿದ್ರು.



