ಬಂಟ್ವಾಳ: ಜಲ್ಲಿ ಸಾಗಿಸುವ ಬೃಹತ್ ಗಾತ್ರದ ಲಾರಿಯೊಂದು ಕಾರಿಗೆ ಡಿಕ್ಕಿಯಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಇಂದು ಬೆಳಿಗ್ಗೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ.
ಮೈಸೂರು ಮೂಲದ ಕೃಷ್ಣ ಅರಸ ಎಂಬವರ ಕಾರಿಗೆ ಕೆ.ಎನ್.ಆರ್.ಸಿ.ಕಂಪೆನಿಯ ಲಾರಿ ಡಿಕ್ಕಿಯಾಗಿ
ಕೃಷ್ಣ ಅರಸ ಅವರು ಮೈಸೂರಿನಿಂದ ಬಂಟ್ವಾಳ ಕಡೆಯಿಂದ ಮೂಡಬಿದಿರೆ ಅಳ್ವಾಸ್ ಕಾಲೇಜಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.ಕೃಷ್ಣ ಅರಸ ಅವರ ಮಗಳು ಮೂಡಬಿದಿರೆಯ ಅಳ್ವಾಸ್ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದ ದೀಪಾವಳಿ ರಜೆ ನಿಮಿತ್ತ ಊರಿಗೆ ಕರೆದುಕೊಂಡು ಹೋಗುವ ಉದ್ದೇಶದಿಂದ ಮೂಡಬಿದಿರೆಯ ಕಡೆಗೆ ತೆರಳುವ ವೇಳೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬರುತ್ತಿದ್ದ ಕೆ.ಎನ್.ಆರ್.ಸಿ.ಕಂಪೆನಿಯ ಲಾರಿ ಎದುರಿನಿಂದ ಡಿಕ್ಕಿ ಹೊಡೆದಿದೆ ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.ಆದರೆ ಅದೃಷ್ಟವಶಾತ್ ಕಾರು ಚಾಲಕ ಕೃಷ್ಣ ಅವರಿಗೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಸ್ಥಳದಲ್ಲಿ ಹಠಾತ್ ಪ್ರತಿಭಟನೆ
ಬಿಸಿರೋಡನಿಂದ ಅಡ್ಡಹೊಳೆವರೆಗೆ ರಾಷ್ಟ್ರೀಯ ಹೆದ್ದಾರಿ ಚತುಷ್ಪತ ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪೆನಿಯವರು ಕಾಮಗಾರಿ ನಡೆಸಲು ಜಲ್ಲಿಯನ್ನು ಕುಪ್ಪೆಪದವು ಎಂಬಲ್ಲಿರುವ ಜಲ್ಲಿ ಪ್ಲ್ಯಾಂಟ್ ನಿಂದ ಬೃಹತ್ ಗಾತ್ರದ ಲಾರಿಗಳ ಮೂಲಕ ತರುತ್ತಾರೆ. ಆದರೆ ಕಂಪೆನಿಯ ಲಾರಿಯ ಚಾಲಕರು ಎ.ಸಿ.ಹಾಕಿಕೊಂಡು ಕಿವಿಗೊಂದು ಇಯರ್ ಪೋನ್ ಸಿಕ್ಕಿಸಿ ಹಾಡು ಕೇಳಿಕೊಂಡು ಅಥವಾ ಮೊಬೈಲ್ ನಲ್ಲಿ ಹರಟೆ ಹೊಡೆಯುತ್ತಾ ರಸ್ತೆಯಲ್ಲಿ ಬರುವ ಇತರ ವಾಹನಗಳ ಬಗ್ಗೆ ಗಮನವಿಲ್ಲದೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬರುತ್ತಾರೆ ಎಂಬುದು ಸ್ಥಳೀಯರ ವಾದ. ಹಾಗಾಗಿ ಕಳೆದ ಎರಡು ವರ್ಷಗಳಿಂದ ಕಂಪೆನಿಯ ಲಾರಿಗಳು ಡಿಕ್ಕಿಯಾಗಿ ಅನೇಕರಿಗೆ ಗಾಯವಾಗಿದೆ ಎಂದು ಅರೋಪ ಮಾಡಿದ್ದಾರೆ.
ಕಂಪೆನಿಯ ಘನಗಾತ್ರದ ವಾಹನಗಳ ಸಂಚಾರದಿಂದ ಪ್ರಾಣಹಾನಿಯ ಜೊತೆಗೆ ಉತ್ತಮವಾಗಿದ್ದ ಡಾಮರು ರಸ್ತೆಯಲ್ಲಿ ಅಲ್ಲಲ್ಲಿ ಹೊಂಡಗಳು ಬಿದ್ದಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಂದು ಅಪಘಾತ ನಡೆದ ಜಾಗದಲ್ಲಿ ಶಾಲೆಯಿದ್ದು, ಮಕ್ಕಳು ಶಾಲೆಗೆ ಬರುವ ಸಮಯದಲ್ಲಿ ಅತೀ ವೇಗ ಮತ್ತು ಅಜಾಗರೂಕತೆಯ ಚಾಲನೆ ಮಾಡಿದರೆ ಅನಾಹುತಗಳು ನಡೆಯಬಹುದು, ಎಂದು ಇಲ್ಲಿ ಸೇರಿದ ಜನರು ಅರೋಪ ಮಾಡಿದ್ದಾರೆ. ಕಂಪೆನಿ ವಿರುದ್ದ ಪ್ರಕರಣ ದಾಖಲಿಸಿ ಮತ್ತು ಕಂಪೆನಿ ಲಾರಿಗಳಿಗೆ ಸ್ಪೀಡ್ ಕಂಟ್ರೋಲ್ ಕಿಟ್ ಹಾಕಿ ಎಂದು ಸಾರ್ವಜನಿಕ ರು ಒತ್ತಾಯ ಮಾಡಿದ್ದಾರೆ.
ಕೆಲ ಹೊತ್ತು ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಕಂಪೆನಿ ಮತ್ತು ಲಾರಿ ಚಾಲಕರ ವಿರುದ್ದ ಸಾರ್ವಜನಿಕರು ರೊಚ್ಚಿಗೆದ್ದ ಘಟನೆ ನಡೆಯಿತು. ಅಮಾರ್ಗದಲ್ಲಿ ಬರುವ ಕಂಪೆನಿಯ ಎಲ್ಲಾ ಲಾರಿಗಳನನ್ನು ನಿಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು. ಘಟನೆಯಿಂದ ಸ್ಥಳದಲ್ಲಿ ಜಮಾಯಿಸಿದ್ದ ಜನರನ್ನು ಪೋಲಿಸರು ಚದುರಿಸಿದರು. ಸ್ಥಳಕ್ಕೆ ಟ್ರಾಫಿಕ್ ಎಸ್.ಐ. ಸುತೇಶ್, ಮತ್ತು ಸಂಜೀವ ಹಾಗೂ ಎಎಸ್.ಐ ಸುರೇಶ್ ಪಡಾರ್, ಸಿಬ್ಬಂದಿಗಳಾದ ರಾಜು, ವಿವೇಕ್, ಸಂತೋಷ ಬೇಟಿ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…