ಇತರೆ

ಬೃಹತ್ ಗಾತ್ರದ ಲಾರಿಯೊಂದು ಕಾರಿಗೆ ಡಿಕ್ಕಿ..!; ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ಘಟನೆ

ಬಂಟ್ವಾಳ: ಜಲ್ಲಿ ಸಾಗಿಸುವ ಬೃಹತ್ ಗಾತ್ರದ ಲಾರಿಯೊಂದು ಕಾರಿಗೆ ಡಿಕ್ಕಿಯಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಇಂದು ಬೆಳಿಗ್ಗೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ.


ಮೈಸೂರು ಮೂಲದ ಕೃಷ್ಣ ಅರಸ ಎಂಬವರ ಕಾರಿಗೆ ಕೆ.ಎನ್.ಆರ್.ಸಿ.ಕಂಪೆನಿಯ ಲಾರಿ ಡಿಕ್ಕಿಯಾಗಿ
ಕೃಷ್ಣ ಅರಸ ಅವರು ಮೈಸೂರಿನಿಂದ ಬಂಟ್ವಾಳ ಕಡೆಯಿಂದ ಮೂಡಬಿದಿರೆ ಅಳ್ವಾಸ್ ಕಾಲೇಜಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.ಕೃಷ್ಣ ಅರಸ ಅವರ ಮಗಳು ಮೂಡಬಿದಿರೆಯ ಅಳ್ವಾಸ್ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದ ದೀಪಾವಳಿ ರಜೆ ನಿಮಿತ್ತ ಊರಿಗೆ ಕರೆದುಕೊಂಡು ಹೋಗುವ ಉದ್ದೇಶದಿಂದ ಮೂಡಬಿದಿರೆಯ ಕಡೆಗೆ ತೆರಳುವ ವೇಳೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬರುತ್ತಿದ್ದ ಕೆ.ಎನ್.ಆರ್.ಸಿ.ಕಂಪೆನಿಯ ಲಾರಿ ಎದುರಿನಿಂದ ಡಿಕ್ಕಿ ಹೊಡೆದಿದೆ ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.ಆದರೆ ಅದೃಷ್ಟವಶಾತ್ ಕಾರು ಚಾಲಕ ಕೃಷ್ಣ ಅವರಿಗೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.


‌ ಸ್ಥಳದಲ್ಲಿ ಹಠಾತ್ ಪ್ರತಿಭಟನೆ
ಬಿಸಿರೋಡನಿಂದ ಅಡ್ಡಹೊಳೆವರೆಗೆ ರಾಷ್ಟ್ರೀಯ ಹೆದ್ದಾರಿ ಚತುಷ್ಪತ ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪೆನಿಯವರು ಕಾಮಗಾರಿ ನಡೆಸಲು ಜಲ್ಲಿಯನ್ನು ಕುಪ್ಪೆಪದವು ಎಂಬಲ್ಲಿರುವ ಜಲ್ಲಿ ಪ್ಲ್ಯಾಂಟ್ ನಿಂದ ಬೃಹತ್ ಗಾತ್ರದ ಲಾರಿಗಳ ಮೂಲಕ ತರುತ್ತಾರೆ. ಆದರೆ ಕಂಪೆನಿಯ ಲಾರಿಯ ಚಾಲಕರು ಎ.ಸಿ.ಹಾಕಿಕೊಂಡು ಕಿವಿಗೊಂದು ಇಯರ್ ಪೋನ್ ಸಿಕ್ಕಿಸಿ ಹಾಡು ಕೇಳಿಕೊಂಡು ಅಥವಾ ಮೊಬೈಲ್ ನಲ್ಲಿ ಹರಟೆ ಹೊಡೆಯುತ್ತಾ ರಸ್ತೆಯಲ್ಲಿ ಬರುವ ಇತರ ವಾಹನಗಳ ಬಗ್ಗೆ ಗಮನವಿಲ್ಲದೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬರುತ್ತಾರೆ ಎಂಬುದು ಸ್ಥಳೀಯರ ವಾದ. ಹಾಗಾಗಿ ಕಳೆದ ಎರಡು ವರ್ಷಗಳಿಂದ ಕಂಪೆನಿಯ ಲಾರಿಗಳು ಡಿಕ್ಕಿಯಾಗಿ ಅನೇಕರಿಗೆ ಗಾಯವಾಗಿದೆ ಎಂದು ಅರೋಪ ಮಾಡಿದ್ದಾರೆ.


‌‌ ಕಂಪೆನಿಯ ಘನಗಾತ್ರದ ವಾಹನಗಳ ಸಂಚಾರದಿಂದ ಪ್ರಾಣಹಾನಿಯ ಜೊತೆಗೆ ಉತ್ತಮವಾಗಿದ್ದ ಡಾಮರು ರಸ್ತೆಯಲ್ಲಿ ಅಲ್ಲಲ್ಲಿ ಹೊಂಡಗಳು ಬಿದ್ದಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಂದು ಅಪಘಾತ ನಡೆದ ಜಾಗದಲ್ಲಿ ಶಾಲೆಯಿದ್ದು, ಮಕ್ಕಳು ಶಾಲೆಗೆ ಬರುವ ಸಮಯದಲ್ಲಿ ಅತೀ ವೇಗ ಮತ್ತು ಅಜಾಗರೂಕತೆಯ ಚಾಲನೆ ಮಾಡಿದರೆ ಅನಾಹುತಗಳು ನಡೆಯಬಹುದು, ಎಂದು ಇಲ್ಲಿ ಸೇರಿದ ಜನರು ಅರೋಪ ಮಾಡಿದ್ದಾರೆ. ಕಂಪೆನಿ ವಿರುದ್ದ ಪ್ರಕರಣ ದಾಖಲಿಸಿ ಮತ್ತು ಕಂಪೆನಿ ಲಾರಿಗಳಿಗೆ ಸ್ಪೀಡ್ ಕಂಟ್ರೋಲ್ ಕಿಟ್ ಹಾಕಿ ಎಂದು ಸಾರ್ವಜನಿಕ ರು ಒತ್ತಾಯ ಮಾಡಿದ್ದಾರೆ.

ಕೆಲ ಹೊತ್ತು ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಕಂಪೆನಿ ಮತ್ತು ಲಾರಿ ಚಾಲಕರ ವಿರುದ್ದ ಸಾರ್ವಜನಿಕರು ರೊಚ್ಚಿಗೆದ್ದ ಘಟನೆ ನಡೆಯಿತು. ಅಮಾರ್ಗದಲ್ಲಿ ಬರುವ ಕಂಪೆನಿಯ ಎಲ್ಲಾ ಲಾರಿಗಳನನ್ನು ನಿಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು. ಘಟನೆಯಿಂದ ಸ್ಥಳದಲ್ಲಿ ಜಮಾಯಿಸಿದ್ದ ಜನರನ್ನು ಪೋಲಿಸರು ಚದುರಿಸಿದರು. ಸ್ಥಳಕ್ಕೆ ಟ್ರಾಫಿಕ್ ಎಸ್.ಐ. ಸುತೇಶ್, ಮತ್ತು ಸಂಜೀವ ಹಾಗೂ ಎಎಸ್.ಐ ಸುರೇಶ್ ಪಡಾರ್, ಸಿಬ್ಬಂದಿಗಳಾದ ರಾಜು, ವಿವೇಕ್, ಸಂತೋಷ ಬೇಟಿ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…

1 day ago

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಥೈಲ್ಯಾಂಡ್‌ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…

1 day ago

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…

1 day ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…

1 day ago

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಬಿ.ಸಿ.ರೋಡ್‌ನ ಎನ್.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…

1 day ago

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…

2 days ago