ಜನ ಮನದ ನಾಡಿ ಮಿಡಿತ

Advertisement

ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್‌ನ 15ನೇ ವರ್ಷದ ಶ್ರೀ ವಿನಾಯಕ ಯಕ್ಷಕಲೋತ್ಸವ-2023 ಸಂಭ್ರಮ


ಮಂಗಳೂರು: ಕಳೆದ 15 ವರ್ಷದಿಂದ ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್‌ನ ಮೂಲಕ ಕರಾವಳಿ ಜಿಲ್ಲೆ ಸಹಿತ ಬೆಂಗಳೂರು, ಮೈಸೂರು, ಮುಂಬೈಯಂತಹ ನಗರಗಳಲ್ಲಿ ಯಕ್ಷಗಾನ ಪ್ರದರ್ಶನ ಮಾಡುವ ಪ್ರಭುದ್ಧ ತಂಡವಾಗಿರುವ ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ತಂಡದ 15ನೇ ವರ್ಷದ ಶ್ರೀ ವಿನಾಯಕ ಯಕ್ಷಕಲೋತ್ಸವ-2023 ಸಂಭ್ರಮವು. ನವೆಂಬರ್ 11ಕ್ಕೆ ನಡೆಯಲಿದೆ ಎಂದು ಫೌಂಡೇಶನ್‌ನ ಅಧ್ಯಕ್ಷ ಜಯಂತ್ ಅಮೀನ್ ಕೆರೆಕಾಡು ತಿಳಿಸಿದ್ದಾರೆ.

ಅವರು ಕಿನ್ನಿಗೋಳಿಯ ಸ್ವಾಗತ್ ಸಭಾಂಗಣದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಕಾರ್ಯಕ್ರಮವು ಎಸ್‌ಕೋಡಿಯ ಪದ್ಮಾವತಿ ಲಾನ್‌ನಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರ ಉದ್ಘಾಟನೆಯೊಂದಿಗೆ ಗಣ್ಯರ ಉಪಸ್ಥಿತಿಯೊಂದಿಗೆ ಸಭಾ ಕಾರ್ಯಕ್ರಮ, ಪ್ರಶಸ್ತಿ ಪ್ರದಾನ, ಗೌರವಾರ್ಪಣೆ ಹಾಗೂ ಯಕ್ಷಗಾನ ಪ್ರದರ್ಶನದೊಂದಿಗೆ ನಡೆಯಲಿದೆ ಎಂದರು.ಮೇಳದ ಸಂಚಾಲಕ ಅಭಿಜಿತ್ ಮಾಹಿತಿ ನೀಡಿ, ಶ್ರೀ ವಿನಾಯಕ ಮೇಳವು ಪ್ರಸ್ತುತ ವರ್ಷದಲ್ಲಿ 70ಕ್ಕೂ ಮಿಕ್ಕಿ ಯಕ್ಷಗಾನ ಪ್ರದರ್ಶನ ನೀಡಿದೆ. ಮುಂಬೈಯ 9ನೇ ವರ್ಷದ ಪ್ರವಾಸವು ಯಶಸ್ವಿಯಾಗಿ ಮುಗಿಸಿದ್ದೇವೆ, ಮುಂದಿನ ದಶಮಾನೋತ್ಸವ ಸಂಭ್ರಮದಲ್ಲಿ ಹತ್ತು ದಿನಗಳ ಕಾಲ ಯಕ್ಷಗಾನ ಪ್ರದರ್ಶನ ನೀಡಲಿದ್ದೇವೆ ಎಂದರು.ಮೇಳದ ಯಕ್ಷಗುರು ಅಜಿತ್ ಕೆರೆಕಾಡು ಮಾತನಾಡಿ, ಯಕ್ಷಕಲೋತ್ಸವದಲ್ಲಿ ಜಿಲ್ಲೆಯ ಪ್ರಸಿದ್ಧ ಕಲಾವಿದರ ಸಹಿತ ಮೇಳದ 65ಕ್ಕೂ ಮಿಕ್ಕಿ ಕಲಾವಿದರು ಬಣ್ಣ ಹಚ್ಚಲಿದ್ದಾರೆ. ಹಿಮ್ಮೇಳದಲ್ಲಿಯೂ ಕಲಾವಿದರ ಸಂಗಮವಿದೆ. ಪೂರ್ವರಂಗ, ನಂದ ಮುಕುಂದ, ಕರುಣಾಳು ರಾಘವ, ಸಂಭವಾಮಿ ಯುಗೇ ಯುಗೇ, ವಾಸುದೇವ ಸರ್ವಂ ಪ್ರಸಂಗ ಪ್ರದರ್ಶನಗೊಳ್ಳಲಿದೆ ಎಂದರು.
ಸುದ್ಧಿಗೋಷ್ಠಿಯಲ್ಲಿ ಉಪಾಧ್ಯಕ್ಷೆ ಉಷಾ ನರೇಂದ್ರ ಕೆರೆಕಾಡು, ಕಾರ್ಯದರ್ಶಿ ದುರ್ಗಾಪ್ರಸಾದ್, ಸದಸ್ಯರಾದ ಶ್ರೇಯಸ್ ರಾವ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!