ಮಂಗಳೂರು: ಕಳೆದ 15 ವರ್ಷದಿಂದ ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ಫೌಂಡೇಶನ್‌ನ ಮೂಲಕ ಕರಾವಳಿ ಜಿಲ್ಲೆ ಸಹಿತ ಬೆಂಗಳೂರು, ಮೈಸೂರು, ಮುಂಬೈಯಂತಹ ನಗರಗಳಲ್ಲಿ ಯಕ್ಷಗಾನ ಪ್ರದರ್ಶನ ಮಾಡುವ ಪ್ರಭುದ್ಧ ತಂಡವಾಗಿರುವ ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ತಂಡದ 15ನೇ ವರ್ಷದ ಶ್ರೀ ವಿನಾಯಕ ಯಕ್ಷಕಲೋತ್ಸವ-2023 ಸಂಭ್ರಮವು. ನವೆಂಬರ್ 11ಕ್ಕೆ ನಡೆಯಲಿದೆ ಎಂದು ಫೌಂಡೇಶನ್‌ನ ಅಧ್ಯಕ್ಷ ಜಯಂತ್ ಅಮೀನ್ ಕೆರೆಕಾಡು ತಿಳಿಸಿದ್ದಾರೆ.
ಅವರು ಕಿನ್ನಿಗೋಳಿಯ ಸ್ವಾಗತ್ ಸಭಾಂಗಣದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಕಾರ್ಯಕ್ರಮವು ಎಸ್‌ಕೋಡಿಯ ಪದ್ಮಾವತಿ ಲಾನ್‌ನಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರ ಉದ್ಘಾಟನೆಯೊಂದಿಗೆ ಗಣ್ಯರ ಉಪಸ್ಥಿತಿಯೊಂದಿಗೆ ಸಭಾ ಕಾರ್ಯಕ್ರಮ, ಪ್ರಶಸ್ತಿ ಪ್ರದಾನ, ಗೌರವಾರ್ಪಣೆ ಹಾಗೂ ಯಕ್ಷಗಾನ ಪ್ರದರ್ಶನದೊಂದಿಗೆ ನಡೆಯಲಿದೆ ಎಂದರು.ಮೇಳದ ಸಂಚಾಲಕ ಅಭಿಜಿತ್ ಮಾಹಿತಿ ನೀಡಿ, ಶ್ರೀ ವಿನಾಯಕ ಮೇಳವು ಪ್ರಸ್ತುತ ವರ್ಷದಲ್ಲಿ 70ಕ್ಕೂ ಮಿಕ್ಕಿ ಯಕ್ಷಗಾನ ಪ್ರದರ್ಶನ ನೀಡಿದೆ. ಮುಂಬೈಯ 9ನೇ ವರ್ಷದ ಪ್ರವಾಸವು ಯಶಸ್ವಿಯಾಗಿ ಮುಗಿಸಿದ್ದೇವೆ, ಮುಂದಿನ ದಶಮಾನೋತ್ಸವ ಸಂಭ್ರಮದಲ್ಲಿ ಹತ್ತು ದಿನಗಳ ಕಾಲ ಯಕ್ಷಗಾನ ಪ್ರದರ್ಶನ ನೀಡಲಿದ್ದೇವೆ ಎಂದರು.ಮೇಳದ ಯಕ್ಷಗುರು ಅಜಿತ್ ಕೆರೆಕಾಡು ಮಾತನಾಡಿ, ಯಕ್ಷಕಲೋತ್ಸವದಲ್ಲಿ ಜಿಲ್ಲೆಯ ಪ್ರಸಿದ್ಧ ಕಲಾವಿದರ ಸಹಿತ ಮೇಳದ 65ಕ್ಕೂ ಮಿಕ್ಕಿ ಕಲಾವಿದರು ಬಣ್ಣ ಹಚ್ಚಲಿದ್ದಾರೆ. ಹಿಮ್ಮೇಳದಲ್ಲಿಯೂ ಕಲಾವಿದರ ಸಂಗಮವಿದೆ. ಪೂರ್ವರಂಗ, ನಂದ ಮುಕುಂದ, ಕರುಣಾಳು ರಾಘವ, ಸಂಭವಾಮಿ ಯುಗೇ ಯುಗೇ, ವಾಸುದೇವ ಸರ್ವಂ ಪ್ರಸಂಗ ಪ್ರದರ್ಶನಗೊಳ್ಳಲಿದೆ ಎಂದರು.
ಸುದ್ಧಿಗೋಷ್ಠಿಯಲ್ಲಿ ಉಪಾಧ್ಯಕ್ಷೆ ಉಷಾ ನರೇಂದ್ರ ಕೆರೆಕಾಡು, ಕಾರ್ಯದರ್ಶಿ ದುರ್ಗಾಪ್ರಸಾದ್, ಸದಸ್ಯರಾದ ಶ್ರೇಯಸ್ ರಾವ್ ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…