ಸ್ಲೀಪರ್ ಬಸ್ ಒಂದಕ್ಕೆ ದಾರಿ ಮಧ್ಯೆ ಬೆಂಕಿ ಹತ್ತಿಕೊಂಡು ಉರಿದ ಕಾರಣ ಮಲಗಿದ್ದ ಇಬ್ಬರು ಪ್ರಯಾಣಿಕರು ಸಜೀವ ದಹನವಾದ ದಾರುಣ ಘಟನೆ ದೆಹಲಿ ಮತ್ತು ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುರುಗ್ರಾಮದ ಸಿಗ್ನೇಚರ್ ಟವರ್ ಮೇಲ್ಸೇತುವೆ ಬಳಿ ನಡೆದಿದೆ.
ದೆಹಲಿಗೆ ತೆರಳುತ್ತಿದ್ದ ಪ್ರಯಾಣಿಕರ ಬಸ್‌ಗೆ ಬುಧವಾರ ರಾತ್ರಿ ಗುರುಗ್ರಾಮ್ ತಲುಪುತ್ತಿದ್ದಂತೆ ಬಸ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್ನಲ್ಲಿದ್ದ ಕೆಲ ಪ್ರಯಾಣಿಕರು ಬಸ್‌ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ ನಿದ್ರಾವಸ್ಥೆಯಲ್ಲಿದ್ದ ಇಬ್ಬರಿಗೆ ಬೆಂಕಿ ತಗುಲಿ ಮೃತಪಟ್ಟಿದ್ದಾರೆ. ಈ ದುರಂತದಲ್ಲಿ 12ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.
ಘಟನಾ ಸ್ಥಳಕ್ಕೆ ಪೋಲಿಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ಆರಿಸಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸ್ಲೀಪರ್ ಬಸ್‌ನಿಂದ ಎರಡು ಮೃತ ದೇಹಗಳನ್ನು ಹೊರತೆಗೆಯಲಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…