ಜನ ಮನದ ನಾಡಿ ಮಿಡಿತ

Advertisement

ಸೌಜನ್ಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!; ಸಂತೋಷ್ ರಾವ್‌ಗೆ ಮತ್ತೊಮ್ಮೆ ಸಂಕಷ್ಟ ಎದುರಾಗುತ್ತಾ..??

ಹನ್ನೊಂದು ರ‍್ಷದ ಹಿಂದೆ ನಡೆದ ಕುಮಾರಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಿಬಿಐ ಹೈಕರ‍್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ಅರ್ಜಿಯು ಇನ್ನೂ ವಿಚಾರಣೆಗೆ ಬರಬೇಕಿದೆ. ಪ್ರಕರಣದ ಆರೋಪಿ ಸಂತೋಷ್ ರಾವ್ ನಿರ್ದೂಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ 2023ರ ಜೂನ್ 16ರಂದು ತೀರ್ಪು ನೀಡಿತ್ತು. ಮೇಲ್ಮನವಿ ಸಲ್ಲಿಸಲು ಸಿಬಿಐಗೆ 60 ದಿನಗಳ ಕಾಲಾವಕಾಶ ಸಹ ನೀಡಲಾಗಿತ್ತು. ಆದರೆ, 4 ತಿಂಗಳ ಬಳಿಕ ಸಿಬಿಐ ಮೇಲ್ಮನವಿ ಸಲ್ಲಿಸಿದೆ. ಈ ಹಿಂದೆ ಆರೋಪಿ ಸಂತೋಷ್ ರಾವ್ ನಿರ್ದೋಷಿ ಎಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿತ್ತು. ಸಿಬಿಐ ಅಧಿಕಾರಿಗಳು ಸಂತೋಷ್ ರಾವ್ ವಿರುದ್ಧದ ಆರೋಪ ಸಾಬೀತು ಪಡಿಸಲು ವಿಫಲ ಎಂದು ಕೋರ್ಟ್ ಹೇಳಿತ್ತು. ಹೀಗಾಗಿ ಸಂತೋಷ್ ರಾವ್ ಅವರನ್ನು ನಿರಾಪರಾಧಿ ಎಂದು ಬಿಡುಗಡೆಗೊಳಿಸಿದ್ರು. ಆ ಬಳಿಕ ಮೇಲ್ಮನವಿ ಸಲ್ಲಿಸಲು ಸಿಬಿಐಗೆ 60 ದಿನಗಳ ಕಾಲಾವಕಾಶ ಇತ್ತು. ಆದರೆ ಇದೀಗ ಅವಧಿ ಮುಗಿದ ಮೇಲೆ ನಾಲ್ಕು ತಿಂಗಳ ಬಳಿಕ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಆ ಮೂಲಕ ಸೌಜನ್ಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕಿದ್ದು, ಸಿಬಿಐ ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್ ಅಂಗೀಕರಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!