ಜನ ಮನದ ನಾಡಿ ಮಿಡಿತ

Advertisement

ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿ; ಧಾರವಾಡ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಘಟಕಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ


ಉಡುಪಿ: ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿಯ ಭಾಗವಾಗಿ ಧಾರವಾಡದ ಪದ್ಮಜಾ ಇಂಡಸ್ಟ್ರೀಸ್ ನಲ್ಲಿ ಸಿದ್ಧಗೊಳ್ಳುತ್ತಿರುವ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಘಟಕಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಸೂಚನೆಯಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸ್ಟೀಲ್ ಬ್ರಿಡ್ಜ್ ನಿರ್ಮಾಣದ ಬಗ್ಗೆ ಸಮಾಲೋಚನೆ ನಡೆಸಿ ಶೀಘ್ರದಲ್ಲಿ ಹಸ್ತಾಂತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಸುಮಾರು 5.20 ಕೋಟಿ ವೆಚ್ಚದಲ್ಲಿ 54 ಮೀಟರ್ ಉದ್ದ ಹಾಗೂ 12.5 ಮೀಟರ್ ಅಗಲದ 385 ಟನ್ ಸಾಮರ್ಥ್ಯದ ಸ್ಟೀಲ್ ಬ್ರಿಡ್ಜ್ ನ ಶೇ. 60 ಕಾಮಗಾರಿ ಪೂರ್ಣಗೊಂಡಿದ್ದು, ಹದಿನೈದು ದಿನಗಳಲ್ಲಿ ಶೇ. 80 ಪೂರ್ಣಗೊಂಡ ಬಳಿಕ ರೈಲ್ವೇ ಇಲಾಖೆಯ ತಾಂತ್ರಿಕ ವಿಭಾಗ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ ಬಳಿಕ ಡಿಸೆಂಬರ್ ಮೊದಲ ವಾರದಲ್ಲಿ ಇಂದ್ರಾಳಿಯಲ್ಲಿ ಸ್ಟೀಲ್ ಬ್ರಿಡ್ಜ್ ಅಳವಡಿಕೆ ಪ್ರಕ್ರಿಯೆ ನಡೆಯಲಿದ್ದು, ಆ ಬಳಿಕ ಸ್ಟೀಲ್ ಬ್ರಿಡ್ಜ್ ಮೇಲೆ 200 ಎಂ. ಎಂ. ಕಾಂಕ್ರಿಟೀಕರಣ ನಡೆಯಲಿದೆ.
ಡಿಸೆಂಬರ್ ಕೊನೆಯ ವಾರದಲ್ಲಿ ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ಜನವರಿಯಲ್ಲಿ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸುಗ್ಗಿ ಸುಧಾಕರ ಶೆಟ್ಟಿ, ಮಹೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!