ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಗುರುವಾರ ಬೆಳಗ್ಗೆ ಮನೆಯಲ್ಲಿ ಅವರಿಗೆ ಎದೆನೋವು ಕಾಣಿಸಿದೆ. ಕೂಡಲೇ ಅವರನ್ನ ನಗರದ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಹೃದಯಾಘಾತ ಅಗಿರುವುದು ದೃಢಪಟ್ಟದೆ. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಕರೆದೆಯ್ಯುತ್ತಿದ್ದಾಗ ದಾರಿ ಮದ್ಯೆ ಹೆಮ್ಮಣ್ಣ ತೀವ್ರ ಅಸ್ವಸ್ಥ ಗೊಂಡಿದ್ದ ಶಶಿಧರ್ ಹೆಮ್ಮಣ್ಣ ಅವರು ಮಣಿಪಾಲ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ದುರಾದೃಷ್ಟವಾಶಾತ್ ರಾತ್ರಿ ಹೊತ್ತಿಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ.
1991 ರಲ್ಲಿ ಕುಂದಪ್ರಭ ಪತ್ರಿಕೆಯ ಮೂಲಕ ವೃತ್ತಿ ಜೀವನ ಅರಂಭಿಸಿದ ಶಶಿಧರ್ – “ಕ್ಷಿತಿಜ” ಎನ್ನುವ ಸ್ವಂತ ವಾರ ಪತ್ರಿಕೆ ಅರಂಭಿಸಿ , ಮುಖ್ಯ ಸಂಪಾದಕರಾಗಿದ್ದರು.ಬಳಿಕ ಈ ಟಿವಿ ಕನ್ನಡ ,ಡಿಡಿ ನ್ಯೂಸ್ ನಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.ಹಲವು ಉದಯೋನ್ಮುಕ ಪತ್ರಕರ್ತರಿಗೆ ಪ್ರೇರಕರಾಗಿದ್ದ ಹೆಮಣ್ಣ ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕೃಷಿ ಸಂಬಂಧಿತ ಲೇಖನಗಳನ್ನು ಬರೆದು , ಸರಕಾರದ ಗಮನ ಸೆಳೆದಿದ್ದರು.
ಇತ್ತೀಚೆಗಷ್ಟೇ ಕನೆಕ್ಟ್ ಮೀಡಿಯಾ ಸಂಸ್ಥೆಯನ್ನು ಹುಟ್ಟುಹಾಕಿ ,ಹಲವು ಯೋಜನೆಗಳನ್ನು ರಾಜ್ಯದಾದ್ಯಂತ ಅರಂಭಿಸುವ ಸಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ರಾಜಕೀಯ ಸಮೀಕ್ಷೆಗಳಲ್ಲಿ ಎತ್ತಿದ ಕೈಯಾಗಿದ್ದ ಇವರಿಗೆ ಹಲವಾರು ರಾಜಕೀಯ ನಾಯಕರನ್ನು ಬೆಳೆಸಿದ ಕೀರ್ತಿ ಸಲ್ಲುತ್ತದೆ.
ಪರಿಸರ ಪ್ರೇಮಿಯೂ ,ಕೃಷಿ ಪ್ರೇಮಿಯೂ ಅಗಿದ್ದ ಇವರು ,ಕರಾವಳಿಯಲ್ಲಿ ಕಾಂಡ್ಲವನ ಯೋಜನೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.ಕರಾವಳಿಯಲ್ಲಿ ಪ್ರಾಕೃತಿಕ ವಿಕೋಪಗಳ ಬಗ್ಗೆ ಅಪಾರ ಕಾಳಜಿ ವಹಿಸಿದ್ದರು,ನೆಲ ಜಲ ಸಂರಕ್ಷಣೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ನೀರು ಅರುವ ಮುನ್ನ ಕಾರ್ಯಕ್ರಮದ ಮೂಂಚಣಿಯಲ್ಲಿದ್ದವರು. ಸಾಮಾಜಿಕ ಕಳಕಳಿ ಇದ್ದ ನೇರ ನಡೆಯ ಧೀಮಂತ ಪತ್ರಕರ್ತ ಎಂದು ಹೆಸರಾಗಿದ್ದರು.
ಮೃತರು ತಂದೆ ತಾಯಿ,ಪತ್ನಿ , ಪುತ್ರ , ನಾಲ್ಕು ಜನ ಸಹೋದರು ಹಾಗೂ ಸಹೋದರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಹಿರಿಯ ಪತ್ರಕರ್ತರ ನಿಧನಕ್ಕೆ ನಾಡಿನ ಗಣ್ಯರು ಕಂಬನಿ ಮಿಡಿದಿದ್ದಾರೆ.
ಅಂತಿಮ ಅಂತ್ಯಕ್ರಿಯು ಕುಂದಾಪುರ ತಾಲೂಕಿನ ಕಮಲ ಶಿಲೆ ಸಮೀಪದ ಎಡಮೊಗೆಯಲ್ಲಿರುವ ಕುಟುಂಬದ ಸ್ವಗೃಹದಲ್ಲಿ ಇಂದು ಬೆಳಿಗ್ಗೆ ಸುಮಾರು 9.30 ಕ್ಕೆ ನಡೆಯಲಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…