ಕರಾವಳಿ

ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ ಹೃದಯಾಘಾತದಿಂದ ನಿಧನ

ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಗುರುವಾರ ಬೆಳಗ್ಗೆ ಮನೆಯಲ್ಲಿ ಅವರಿಗೆ ಎದೆನೋವು ಕಾಣಿಸಿದೆ. ಕೂಡಲೇ ಅವರನ್ನ ನಗರದ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಹೃದಯಾಘಾತ ಅಗಿರುವುದು ದೃಢಪಟ್ಟದೆ. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಕರೆದೆಯ್ಯುತ್ತಿದ್ದಾಗ ದಾರಿ ಮದ್ಯೆ ಹೆಮ್ಮಣ್ಣ ತೀವ್ರ ಅಸ್ವಸ್ಥ ಗೊಂಡಿದ್ದ ಶಶಿಧರ್ ಹೆಮ್ಮಣ್ಣ ಅವರು ಮಣಿಪಾಲ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ದುರಾದೃಷ್ಟವಾಶಾತ್ ರಾತ್ರಿ ಹೊತ್ತಿಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ.

1991 ರಲ್ಲಿ ಕುಂದಪ್ರಭ ಪತ್ರಿಕೆಯ ಮೂಲಕ ವೃತ್ತಿ ಜೀವನ ಅರಂಭಿಸಿದ ಶಶಿಧರ್ – “ಕ್ಷಿತಿಜ” ಎನ್ನುವ ಸ್ವಂತ ವಾರ ಪತ್ರಿಕೆ ಅರಂಭಿಸಿ , ಮುಖ್ಯ ಸಂಪಾದಕರಾಗಿದ್ದರು.ಬಳಿಕ ಈ ಟಿವಿ ಕನ್ನಡ ,ಡಿಡಿ ನ್ಯೂಸ್ ನಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.ಹಲವು ಉದಯೋನ್ಮುಕ ಪತ್ರಕರ್ತರಿಗೆ ಪ್ರೇರಕರಾಗಿದ್ದ ಹೆಮಣ್ಣ ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕೃಷಿ ಸಂಬಂಧಿತ ಲೇಖನಗಳನ್ನು ಬರೆದು , ಸರಕಾರದ ಗಮನ ಸೆಳೆದಿದ್ದರು.

ಇತ್ತೀಚೆಗಷ್ಟೇ ಕನೆಕ್ಟ್ ಮೀಡಿಯಾ ಸಂಸ್ಥೆಯನ್ನು ಹುಟ್ಟುಹಾಕಿ ,ಹಲವು ಯೋಜನೆಗಳನ್ನು ರಾಜ್ಯದಾದ್ಯಂತ ಅರಂಭಿಸುವ ಸಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ರಾಜಕೀಯ ಸಮೀಕ್ಷೆಗಳಲ್ಲಿ ಎತ್ತಿದ ಕೈಯಾಗಿದ್ದ ಇವರಿಗೆ ಹಲವಾರು ರಾಜಕೀಯ ನಾಯಕರನ್ನು ಬೆಳೆಸಿದ ಕೀರ್ತಿ ಸಲ್ಲುತ್ತದೆ.

ಪರಿಸರ ಪ್ರೇಮಿಯೂ ,ಕೃಷಿ ಪ್ರೇಮಿಯೂ ಅಗಿದ್ದ ಇವರು ,ಕರಾವಳಿಯಲ್ಲಿ ಕಾಂಡ್ಲವನ ಯೋಜನೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.ಕರಾವಳಿಯಲ್ಲಿ ಪ್ರಾಕೃತಿಕ ವಿಕೋಪಗಳ ಬಗ್ಗೆ ಅಪಾರ ಕಾಳಜಿ ವಹಿಸಿದ್ದರು,ನೆಲ‌ ಜಲ ಸಂರಕ್ಷಣೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ನೀರು ಅರುವ ಮುನ್ನ ಕಾರ್ಯಕ್ರಮದ ಮೂಂಚಣಿಯಲ್ಲಿದ್ದವರು. ಸಾಮಾಜಿಕ ಕಳಕಳಿ ಇದ್ದ ನೇರ ನಡೆಯ ಧೀಮಂತ ಪತ್ರಕರ್ತ ಎಂದು ಹೆಸರಾಗಿದ್ದರು.

ಮೃತರು ತಂದೆ ತಾಯಿ,ಪತ್ನಿ , ಪುತ್ರ , ನಾಲ್ಕು ಜನ ಸಹೋದರು ಹಾಗೂ ಸಹೋದರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಹಿರಿಯ ಪತ್ರಕರ್ತರ ನಿಧನಕ್ಕೆ ನಾಡಿನ ಗಣ್ಯರು ಕಂಬನಿ‌ ಮಿಡಿದಿದ್ದಾರೆ.

ಅಂತಿಮ ಅಂತ್ಯಕ್ರಿಯು ಕುಂದಾಪುರ ತಾಲೂಕಿನ ಕಮಲ ಶಿಲೆ ಸಮೀಪದ ಎಡಮೊಗೆಯಲ್ಲಿರುವ ಕುಟುಂಬದ ಸ್ವಗೃಹದಲ್ಲಿ ಇಂದು ಬೆಳಿಗ್ಗೆ ಸುಮಾರು 9.30 ಕ್ಕೆ ನಡೆಯಲಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…

1 day ago

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಥೈಲ್ಯಾಂಡ್‌ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…

1 day ago

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…

1 day ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…

1 day ago

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಬಿ.ಸಿ.ರೋಡ್‌ನ ಎನ್.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…

1 day ago

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…

2 days ago