ಪುರಸಭಾ ವ್ಯಾಪ್ತಿಯ ಬಿ.ಸಿ.ರೋಡಿನ ನಗರ ಪ್ರದೇಶದಲ್ಲಿ ಹಾದು ಹೋಗುವ ಕಾಂಕ್ರೀಟ್ ರಸ್ತೆಯೊಂದು ಅವೈಜ್ಞಾನಿಕತೆಯಿಂದ ಕೂಡಿದ್ದು, ರಸ್ತೆಯನ್ನು ಸರಿಪಡಿಸಿಕೊಡುವಂತೆ ಪುರಸಭಾ ಮುಖ್ಯಾಧಿಕಾರಿಗೆ ಬಂಟ್ವಾಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಬಿಂದಿಯಾ ನಾಯಕ್ ಅವರು ಮನವಿ ಮಾಡಿದ್ದಾರೆ.

ಬಿ.ಸಿ.ರೋಡಿನ ಖಾಸಗಿ ಬಸ್ ನಿಲ್ದಾಣದ ಸಮೀಪ ಸರ್ವೀಸ್ ರಸ್ತೆಯಿಂದ ಹಾದುಹೋಗುವ ವಿವೇಕ ನಗರ ರಸ್ತೆಯಲ್ಲಿ ಹತ್ತಾರು ಮನೆಗಳಿವೆ, ಜೊತೆಗೆ ಮಕ್ಕಳ ಆಸ್ಪತ್ರೆಗಳಿವೆ. ಹೀಗಿರುವಾಗ ರಸ್ತೆಯಲ್ಲಿ ಗುಂಡಿ ಬಿದ್ದ ಕಾರಣದಿಂದ ವಾಹನ ಸವಾರರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಅದಲ್ಲದೇ ವಿವೇಕ ನಗರ ರಸ್ತೆಗೆ ಪ್ರವೇಶ ಮಾಡುವ ರಸ್ತೆಯಲ್ಲಿ ಖಾಸಗಿ ವ್ಯಕ್ತಿಯೋರ್ವರು ನೀರಿನ ಪೈಪ್ ಅಳವಡಿಕೆ ಮಾಡಿರುವ ಹಿನ್ನೆಲೆಯಲ್ಲಿ ಕಾಂಕ್ರೀಟ್ ರಸ್ತೆಯನ್ನು ಅಗೆದು ಹಾಕಿದ್ದಾರೆ. ಬಳಿಕ ಅ ಗುಂಡಿಯನ್ನು ಮುಚ್ಚಿಲ್ಲ ಎಂದು ಆರೋಪಿಸಿದ್ದಾರೆ.



