ಮುಲ್ಕಿ: ಪಡುಪಣಂಬೂರು ಸಹಕಾರಿ ವ್ಯವಸಾಯಿಕ ಸಂಘ ದ ವತಿಯಿಂದ ಸಂಘದ ನಾರಾಯಣ ಸನಿಲ್ ಸಭಾಭವನದಲ್ಲಿ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಸಮಾರಂಭ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷ ಎಸ್ ಎಸ್ ಸತೀಶ್ ಭಟ್ ವಹಿಸಿ ಮಾತನಾಡಿ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದರ ಜೊತೆಗೆ ಸಹಕಾರ ಸಂಘದ ಅಭಿವೃದ್ಧಿಗೆ ಸಂಘದ ಸದಸ್ಯರು ಶ್ರಮಿಸಬೇಕು ಹಾಗೂ ಬಡ ಮಕ್ಕಳ ಶಿಕ್ಷಣಕ್ಕೆ ವೈಯುಕ್ತಿಕ ನೆಲೆಯಲ್ಲಿ ಒಂದು ಲಕ್ಷ ರುಪಾಯಿ ಸಹಾಯಧನ ಘೋಷಿಸಿದರು. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಿಮಕರ್, ಮಾತನಾಡಿ ಕಳೆದ ಸಂಘದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಸಂಘವು ಸುಮಾರು ಒಂದು ಕೋಟಿ ಗೂ ಮಿಕ್ಕಿ ಲಾಭದತ್ತ ಸಾಗುತ್ತಿದ್ದು ಮುಂದಿನ ದಿನಗಳಲ್ಲಿ ಬಡ ವಿದ್ಯಾರ್ಥಿಗಳನ್ನು ದತ್ತು ತೆಗೆದುಕೊಳ್ಳುವ ಮೂಲಕ ಶಿಕ್ಷಣಕ್ಕೆ ಸಹಾಯ ನಿರಂತರವಾಗಿ ನಡೆಯಲಿದೆ ಎಂದರು.


ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಹಳೆಯಂಗಡಿ ಗ್ರಾ.ಪಂ. ಅಧ್ಯಕ್ಷೆ ಪೂರ್ಣಿಮಾ, ಪಿ ಸಿ ಎ ಬ್ಯಾಂಕ್ ನಿರ್ದೇಶಕರಾದ ಶ್ಯಾಮ್ ಪ್ರಸಾದ್, ವಿನೋದ್ ಕುಮಾರ್ ಬೊಳ್ಳೂರು, ಗೀತಾ ಆರ್ ಶೆಟ್ಟಿ, ಯೋಗೀಶ್ ಪಾವಂಜೆ, ವಸಂತ್ ಬೆರ್ನಾಡ್, ಮೀರಾಬಾಯಿ, ರೋಹಿಣಿ ಬಿ ಶೆಟ್ಟಿ, ಅಶೋಕ್ ಬಂಗೇರ, ಮುಖೇಶ್ ಸುವರ್ಣ, ದಿವ್ಯ ,ಶಂಕರ್ , ನಾಮನಿರ್ದೇಶಕರಾದ ರಾಜೇಶ್ ದಾಸ್, ಸಿಬ್ಬಂದಿ ನವೀನ್ ಬಾಂದಕೆರೆ,ಎಸ್ ಡಿ ಸಿಸಿ ಬ್ಯಾಂಕ್ ಮೇಲ್ವಿಚಾರಕರಾದ ಕಿರಣ್ ಕುಮಾರ್ ಶೆಟ್ಟಿ, ಜೊತೆ ಕಾರ್ಯದರ್ಶಿ ಶ್ರೀಕಾಂತಿ, ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು 400ಕ್ಕೂ ಮಿಕ್ಕಿ ಮಕ್ಕಳಿಗೆ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಿಸಲಾಯಿತು.




