ಉಡುಪಿ, ನ.12: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಲೆಯಾದವರನ್ನು ಹಸೀನಾ(46), ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್ (21) ಮತ್ತು ಅಸೀಮ್(14) ಎಂದು ಗುರುತಿಸಲಾಗಿದೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿದ್ದು, ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಸಹಿತ, ಮಾಹಿತಿ ಸಂಗ್ರಹಿಸುತ್ತಿದ್ದಾರೆ.




