ಕರಾವಳಿ

ಪಾವಂಜೆ: ಕೃಷಿ ನಿನಾದ ಮಣ್ಣಿನೊಳಗಿನ ಅನ್ನ ವಿದ್ಯಾರ್ಥಿಗಳಿಗೆ ಕೃಷಿ ಪರಿಚಯ ಶಿಬಿರ


ಮುಲ್ಕಿ:ಮಂಗಳೂರು ವಿಶ್ವವಿದ್ಯಾನಿಲಯ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠ ಮಂಗಳ ಗಂಗೋತ್ರಿಯ ಸಂಯೋಜನೆಯಲ್ಲಿ
ಕಾಟಿಪಳ್ಳ ಬ್ರಹ್ಮಶ್ರೀ ನಾರಾಯಣಗುರು ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಜೂನಿಯರ್ ರೆಡ್‌ ಕ್ರಾಸ್‌ ಘಟಕ, ಸುರತ್ಕಲ್ ಗೋವಿಂದದಾಸ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಹಳೆಯಂಗಡಿ ಸಮೀಪದ ಪಾವಂಜೆಯ ನದಿ ತಟದ ನಿನಾದ ರಂಗಮಂದಿರದ ವಠಾರದಲ್ಲಿ ಕೃಷಿ ನಿನಾದ ಮಣ್ಣಿನೊಳಗಿನ ಅನ್ನ ವಿದ್ಯಾರ್ಥಿಗಳಿಗೊಂದು ಕೃಷಿ ಪರಿಚಯ ಶಿಬಿರ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಮಂಗಳೂರು ವಿ ವಿ ಕುಲಪತಿ ಪ್ರೊ. ಜಯರಾಜ್ ಅಮೀನ್ ಉದ್ಘಾಟಿಸಿ ಮಾತನಾಡಿ ಇಂದಿನ ಯುವ ಜನಾಂಗಕ್ಕೆ ಹಿರಿಯರ ಕೃಷಿ ಬದುಕು ಹಾಗೂ ಪರಿಸರ ಜಾಗೃತಿ ಬಗ್ಗೆ ಅರಿವು ಮೂಡಿಸಬೇಕಾದ ಅಗತ್ಯತೆ ಇದೆ ಎಂದರು.
ಬ್ರಹ್ಮ ಶ್ರೀ ನಾರಾಯಣ ಗುರು ಅಧ್ಯಯನ ಪೀಠದ ಸಂಯೋಜಕ ಡಾ|ಗಣೇಶ್‌ ಅಮೀನ್‌ ಸಂಕಮಾರ್‌, ಮಾತನಾಡಿ ನಮಗೆ ಸಾಮಾಜಿಕ ಜಾಲತಾಣದ ಗೂಗಲ್ ತಂದೆ ತಾಯಿಯಲ್ಲ, ಹಿಂದಿನ ಕಾಲದ ಹಿರಿಯರೇ ನಮ್ಮ ಗೂಗಲ್ ಅವರಿಗೆ ಗೌರವ ಕೊಡುವ ಮುಖಾಂತರ ಹಿಂದಿನ ಕಾಲದ ಕೃಷಿ ಪದ್ಧತಿಯನ್ನು ಮುಂದುವರಿಸಿಕೊಂಡು ಹೋಗುವುದು ಯುವ ಜನಾಂಗದ ಜವಾಬ್ದಾರಿಯಾಗಿದೆ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಸುಮ ಕಡಂಬೋಡಿ ಮಹಾಬಲ ಪೂಜಾರಿ ವಹಿಸಿದ್ದರು
ಜನಪದ ವಿದ್ವಾಂಸ ,ಖ್ಯಾತ ವ್ಯೆದ್ಯ ಡಾ. ವೈ.ಎನ್. ಶೆಟ್ಟಿ ಯವರು ನಾರಾಯಣ ಗುರು ಮಣ್ಣಿನೊಳಗಿನ ಸತ್ತ್ವದ ಕುರಿತು ವಿಶೇಷ ಉಪನ್ಯಾಸ ನೀಡಿದರು
ಕೃಷಿ ಪಾಠದಲ್ಲಿ ಜನಪದ ತಜ್ಞ,ವಿಶ್ರಾಂತ ಶಿಕ್ಷಕ ಕೆ ಕೆ ಪೇಜಾವರರವರು ಮಣ್ಣು-ಅನ್ನದೊಳಗಿನ ತುಳು ಭಾಷೆ ಕುರಿತು,ಆಕೃತಿ ಆಶಯ ಪಬ್ಲಿಕೇಶನ್‌ ನ ಪ್ರಕಾಶಕ ಕಲ್ಲೂರು ನಾಗೇಶ್‌ ರವರು ಬೆವರಿನ ಅರಿವು-ಅನ್ನದ ಹರಿವು ಕುರಿತು ಉಪನ್ಯಾಸ ನೀಡಿದರು
ಮುಖ್ಯ ಅತಿಥಿಗಳಾಗಿ ಕಾಟಿಪಳ್ಳ ನಾರಾಯಣಗುರು ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ ದಯಕರ್‌, ಹಳೆಯಂಗಡಿಯ ಪ್ರಿಯದರ್ಶಿನಿ ಸಹಕಾರಿ ಸಂಘದ ಅಧ್ಯಕ್ಷ ವಸಂತ ಬೆರ್ನಾಡ್, ದಯಾನಂದ ನಾಯಕ್, ಸಂಯೋಜಕಿ ಜಯಂತಿ, ಕುಲ ಸಚಿವ ರಾಜು
ಮತ್ತಿತರರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

3 days ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

3 days ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

3 days ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

3 days ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

3 days ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

3 days ago