ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಬೋಳು ತಲೆ, ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿದ್ದವನೇ ಕಿಲ್ಲರ್!!

ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಜನತೆಗೆ ಬೆಚ್ಚಿ ಬೀಳಿಸಿದ್ದ ಉಡುಪಿ ಜಿಲ್ಲೆಯಲ್ಲಿ ನಡೆದ ಕೊಲೆ. ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಯೊಬ್ಬ ಹತ್ಯೆ ಮಾಡಿದ್ದಾನೆ. ತಾಯಿ ಹಾಗೂ ಆಕೆಯ ಮೂವರು ಮಕ್ಕಳನ್ನು ಆರೋಪಿ ಬರ್ಬರವಾಗಿ ಇರಿದು ಕೊಂದಿದ್ದಾನೆ. ಆಟೋ ಒಂದರಲ್ಲಿ ಬಂದಿದ್ದ ಆರೋಪಿ ಕೊಲೆ ಎಸಗಿ ಮತ್ತೊಂದು ಆಟೋದಲ್ಲಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಬೋಳು ತಲೆಯ ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿದ್ದು, ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಸಹಿತ, ಮಾಹಿತಿ ಸಂಗ್ರಹಿಸುತ್ತಿದ್ದಾರೆ..ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ನೇಜಾರು ತೃಪ್ತಿ ನಗರದಲ್ಲಿರುವ ಮೃತರ ಮನೆಗೆ ಬೆಳಗ್ಗಿನ ವೇಳೆ ಬಂದ ದುಷ್ಕರ್ಮಿಯೊಬ್ಬ ತಾಯಿ ಹಾಗೂ ಮೂವರು ಮಕ್ಕಳನ್ನು ಚೂರಿಯಿಂದ ಇರಿದು ಕೊಂದು ವೃದ್ಧೆಯನ್ನು ಗಾಯಗೊಳಿಸಿದ್ದಾನೆ. ತಾಯಿ ಹಸೀನಾ (46) ಆಕೆಯ ಮಕ್ಕಳಾದ ಅಫ್ನಾನ್ (23), ಅಯಾಂಜ್ (21), ಮತ್ತು ಅಸೀಮ್ (14) ದುಷ್ಕರ್ಮಿಯ ಇರಿತದಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!