ಕೋಳಿ ಮಾಂಸ ವಿಚಾರವಾಗಿ ಮೊನ್ನೆ ಮೊನ್ನೆ ಬಸ್‌ನಲ್ಲಿ ಪ್ರಯಾಣಿಸಿದ ಪ್ರಯಾಣಿಕನನ್ನು ಠಾಣೆಯಲ್ಲಿ ಇಳಿಸಿ ರಾದ್ದಾಂತ ಮಾಡಿದ ಪ್ರಕರಣದ ನೆನಪು ಮಾಸುವ ಮುನ್ನ ಬಿ.ಸಿ.ರೋಡಿನಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಹೌದು, ತೆಂಗಿನ ಎಣ್ಣೆಯನ್ನು ಹಿಡಿದುಕೊಂಡು ಬಸ್‌ನಲ್ಲಿ ಪ್ರಯಾಣಿಸುವ ಮಹಿಳೆಯನ್ನು ಬಸ್ ನಿರ್ವಾಹಕ ಪ್ರಶ್ನಿಸಿ ಬಸ್ಸಿನಿಂದ ಇಳಿಯುವಂತೆ ಹೇಳಿದ್ದಾನೆ.
ಮಂಗಳೂರು – ಹಾಸನ ಬಸ್‌ನಲ್ಲಿ ಮಂಗಳೂರಿನಿAದ ಹಾಸನಕ್ಕೆ ಮಹಿಳರಯೊರ್ವರು ಪ್ರಯಾಣ ಬೆಳೆಸಿದ್ದರು. ಬಸ್ ಹತ್ತಿದ ಮಹಿಳೆಯ ಕೈಯಲ್ಲಿ ಚೀಲವೊಂದಿದ್ದು, ಅದರಲ್ಲಿ ಮೂರು ಕ್ಯಾನ್ ತೆಂಗಿನ ಎಣ್ಣೆ ಇತ್ತು. ಮಂಗಳೂರಿನಿAದ ಸಂಬAಧಿಕರ ಮನೆಗೆ ಶುದ್ಧ ತೆಂಗಿನ ಎಣ್ಣೆಯನ್ನು ಮಹಿಳೆ ತೆಗೆದುಕೊಮಡು ಹೋಗ್ತಾ ಇದ್ರು. ಆದರೆ ಬಸ್ ನಿರ್ವಾಹಕ ಟಿಕೆಟ್ ಪಡೆಯಲು ಬಂದಾಗ ತೆಂಗಿನ ಎಣ್ಣೆಯನ್ನು ನೋಡಿ ಇದು ಏನಮ್ಮಾ ಅಂತ ಕೇಳಿದ್ದಾರೆ. ಮೇಲ್ನೋಟಕ್ಕೆ ತೆಂಗಿನ ಎಣ್ಣೆ ಎಂಬುದು ಖಾತ್ರಿಯಾದರೂ ಕಂಡಕ್ಟರ್ ಮಹಿಳೆಯನ್ನು ಪ್ರಶ್ನಿಸಿದಾಗ ಅವರು ಕೋಪದಲ್ಲಿ ಇದು ಬಾಂಬ್ ಅಂತ ಹೇಳಿದ್ದಾರೆ. ಆದರೆ ಯಾವುದೇ ಆಯಿಲ್ ಪದಾರ್ಥಗಳನ್ನು ಬಸ್‌ನಲ್ಲಿ ಕೊಂಡು ಹೋಗುವಂತಿಲ್ಲ ಎಂದು ಮಹಿಳೆಯಲ್ಲಿ ನಿರ್ವಾಹಕ ವಾಗ್ವಾದ ನಡೆಸಿದ್ದಾನೆ. ಆದರೆ ಮಹಿಳೆ ಇವರ ಮಾತನ್ನು ಕೇಳುವ ಸ್ಥಿತಿಯಲ್ಲಿ ಇರಲಿಲ್ಲ. ಆದರೆ ಪಟ್ಟು ಬಿಡದ ಕಂಡೆಕ್ಟರ್ ಮಂಗಳೂರಿನಿAದ ಬಿಸಿರೋಡು ತಲುಪುತ್ತಿದ್ದಂತೆ ಮಹಿಳೆಯನ್ನು ಒತ್ತಾಯ ಪೂರ್ವಕ ಇಳಿಸಿದ್ದಾನೆ. ಮಹಿಳೆ ನನಗೆ ನ್ಯಾಯ ಬೇಕು ಅಂತ ಸಂಚಾರ ನಿರ್ವಾಹಣೆಗಾಗಿ ಬಿಸಿರೋಡು ಬಸ್ ನಿಲ್ದಾಣದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಟ್ರಾಫಿಕ್ ಪೋಲೀಸ್ ಸಿಬ್ಬಂದಿ ವಿವೇಕ್ ರೈ ಅವರಲ್ಲಿ ಮನವಿ ಮಾಡಿಕೊಂಡರು.
ಮಹಿಳೆ ಬಸ್‌ನಿಂದ ಇಳಿದಿದ್ದಾರೆ ಆದರೂ ಎಣ್ಣೆ ಕ್ಯಾನ್ ಮಾತ್ರ ಬಸ್‌ನೊಳಗೆ ಇತ್ತು. ಮಧ್ಯ ವಯಸ್ಸಿನ ಒಂಟಿ ಮಹಿಳೆಯಾಗಿರುವುದರಿಂದ ಬಸ್ ನಿಂದ ಇಳಿಸಿದ ಕಂಡಕ್ಟರ್‌ನ ವರ್ತನೆ ಸರಿ ಕಾಣದೆ ಸಾರ್ವಜನಿಕರು ಕೂಡ ಜಮಾಯಿಸಿದ್ದರು. ಮಹಿಳೆ ನೀಡಿದ ದೂರಿನಂತೆ ಟ್ರಾಫಿಕ್ ಪೋಲೀಸ್ ವಿವೇಕ್ ಅವರು ಬಸ್ ಚಾಲಕನಲ್ಲಿ ಬಸ್‌ನ್ನು ಬದಿಗೆ ಸರಿಸಿ ಸ್ವಲ್ಪ ಕಾಲ ನಿಲ್ಲುವಂತೆ ಕೇಳಿಕೊಂಡರು. ಬಳಿಕ ಘಟನೆಯಿಂದ ಮಹಿಳೆಗೆ ತೊಂದರೆಯಾಗುತ್ತದೆ ಎಂಬುದನ್ನು ಕಂಡೆಕ್ಟರ್ ಮನಮುಟ್ಟುವಂತೆ ಟ್ರಾಫಿಕ್ ಪೊಲೀಸ್ ತಿಳಿಸಿದ್ದಾರೆ.
ಈ ವಿಚಾರವನ್ನು ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್.ಐ.ರಾಮಕೃಷ್ಣ ಅವರ ಗಮನಕ್ಕೆ ತಂದಿದ್ದಾರೆ. ಅವರು ಪೋನ್ ಮೂಲಕ ನಿರ್ವಾಹಕನಿಗೆ ಬುದ್ದಿ ಮಾತು ಹೇಳಿದ್ದಲ್ಲದೆ ಸಂತ್ರಸ್ತ ಮಹಿಳೆಯನ್ನು ಅದೇ ಬಸ್‌ನಲ್ಲಿ ತೆಂಗಿನ ಎಣ್ಣೆ ಸಹಿತ ಹಾಸನಕ್ಕೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸರಕಾರಿ ಬಸ್ ನಲ್ಲಿ ಯಾವ ವಸ್ತುಗಳನ್ನು ಕೊಂಡು ಹೋಗಬಹುದು? ಯಾವುದನ್ನು ಕೊಂಡು ಹೋಗುವಂತಿಲ್ಲ ಎಂಬುದರ ಬಗ್ಗೆ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬಸ್‌ನ ಹೊರಗಡೆ ಅಥವಾ ಡಿಪೋಗಳಲ್ಲಿ ಜನರಿಗೆ ಮುಟ್ಟುವಂತೆ ಜಾಹೀರಾತುಗಳನ್ನು ಹಾಕಬೇಕು ಎಂಬುದು ಪ್ರಯಾಣಿಕರ ಒತ್ತಾಯವಾಗಿದೆ.
ಒಟ್ಟಿನಲ್ಲಿ ಕೆ.ಎಸ್.ಆರ್.ಟಿ.ಸಿ.ನಿಗಮದ ನಿಯಮಗಳಿಂದ ಬಡವರ ಪಾಲಿಗೆ ಅಂತೂ ಬಸ್ ಪ್ರಯಾಣ ಎಂಬುದು ದುಸ್ತರವಾಗಿ ಬಿಡುತ್ತದೆ. ಸರಕಾರದ ಪ್ರತಿಯೊಂದು¸ Ëಲಭ್ಯಗಳು ಬಡ ಜನರ ಜೀವನಕ್ಕೆ ಪೂರಕವಾಗುವ ನಿಟ್ಟಿನಲ್ಲಿ ಮಾಡಿರುವುದಾಗಿದ್ದರೂ ಕೂಡ ಇಂತಹ ಜನವಿರೋಧಿ ನಿಯಮಗಳಿಂದ ಬಡವರಿಗೆ ತೊಂದರೆಯಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದೆ. ಕರಾವಳಿ ಭಾಗದಿಂದ ಆಯ್ಕೆಯಾದ ಶಾಸಕರುಗಳು ಈ ಬಗ್ಗೆ ಸಚಿವರ ಜೊತೆ ಮಾತನಾಡಿ ನಿಯಮಗಳನ್ನು ಸಡಿಲಿಕೆ ಮಾಡಲು ಒತ್ತಡ ಹಾಕಬೇಕು ಎಂಬುದು ಸಾರ್ವಜನಿಕ ಆಗ್ರಹವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ಈ…
ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶ ಅ.1ರಿಂದ ದಕ್ಷಿಣ ಪಶ್ಚಿಮ ರೈಲ್ವೆಯ ಮೈಸೂರು ವಿಭಾಗದ ಅಧೀನಕ್ಕೆ…
ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದ ಕಾಕ್‌ಪಿಟ್‌ನಲ್ಲಿ ಸಹ ಪೈಲಟ್ ನಡೆಸಿದ ಎನ್ನಲಾದ ವಿಧ್ವಂಸಕ ಕೃತ್ಯದ ಯತ್ನವನ್ನು…
ಕೊಚ್ಚಿಯಲ್ಲಿ ವಿಜೃಂಭಣೆಯ 'ಕೇರಳ-ಕರ್ನಾಟಕ ಜಾನಪದ ಉತ್ಸವ': ಸಚಿವ ಅಬ್ದುಲ್ ಗಫೂರ್ ಅವರಿಂದ ಸಾಧಕರಿಗೆ ಪ್ರಶಸ್ತಿ ಪ್ರದಾನ...! ಕುಂಬಳೆ: ಕರ್ನಾಟಕ ಗಡಿ…
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…