ತುಳುನಾಡಿನ ಕಂಬಳ ಹಿರಿಯರು ಹಿಂದಿನಿAದ ಮಾಡಿಕೊಂಡು ಬಂದಿರುವ ಒಂದು ಪದ್ದತಿ. ಕಂಬಳ ಶಿಸ್ತು ಬದ್ಧವಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಕಂಬಳ ನಡೆಸಿದ್ದೇವೆ ಎಂದು ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷರಾದ ಬೆಳಪು ದೇವಿಪ್ರಸಾದ್ ಶೆಟ್ಟಿಯವರು ಹೇಳಿದ್ದಾರೆ. ಇವರು ಕಾರ್ಕಳದ ಮಿಯಾರು ಲವಕುಶ ಜೋಡುಕೆರೆಯಲ್ಲಿ ನಡೆದ ಪ್ರಾಯೋಗಿಕ ಕಂಬಳದಲ್ಲಿ ಮಾತಾನಾಡಿದ್ರು. ಇದೇ ವೇಳೆ ಲೋಕೇಶ್ ಶೆಟ್ಟಿಯವರು ಮಾತಾನಾಡಿ, ಸೂರ್ಯ ಚಂದ್ರರು ಇರುವವರಿಗೆ ಈ ಕಂಬಳ ಶಾಶ್ವತವಾಗಿರಲಿ. ಅರ್ಹ ವ್ಯಕ್ತಿಗಳನ್ನು ಆಯ್ಕೆ ಮಾಡುವ ಮೂಲಕ ಒಂದು ಉತ್ತಮ ಸಮಿತಿ ನಿರ್ಮಾಣವಾಗಿದೆ ಅಂತ ಮಾಹಿತಿಯನ್ನು ನೀಡಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಕಾರ್ಯಧ್ಯಕ್ಷರಾದ ಗುಣಪಾಲ ಕಡಂಬ, ಪ್ರಸಿದ್ಧ ಓಟದ ಕೋಣದ ಮಾಲಕರಾದ ರಾಯಿ ಶಿತಲ ಅಗರಿ ರಾಜೇಶ್, ಜಿಲ್ಲಾ ಸಮಿತಿ ಗೌರವ ಸಲಹೆಗಾರರಾದ ಬಿ ಆರ್ ಶೆಟ್ಟಿ ಕೂಳೂರು ಪೊಯ್ಯೆಲು, ಜಿಲ್ಲಾ ಸಮಿತಿ ತೀರ್ಪುಗಾರರ ಸಂಚಾಲಕರಾದ ವಿಜಯ್‌ಕುಮಾರ್ ಕಂಗಿನಮನೆ, ಖ್ಯಾತ ಕೋಣದ ಮಾಲಕರಾದ ದಿನೇಶ್ ಶೆಟ್ಟಿ ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…