ಇತರೆ

ಶಿಮಂತೂರು: ಮನುಷ್ಯನ ಸಾಧನೆಗೆ ಏಕಾಗ್ರತೆ ಬೇಕು-ವೆಂಕಟರಮಣ ಆಸ್ರಣ್ಣ

ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕಂಕನಾಡಿ ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ಮನೋವೈದ್ಯ ಸಮಾಲೋಚಕರಾದ ಎಸ್.ಕೆ. ಶ್ರೀಪತಿ ಭಟ್ ಪರೆಂಕಿಲ ರವರಿಗೆ ಶಿಮಂತೂರು ಬ್ರಾಹ್ಮಣ ಬಂಧು ಮಿತ್ರರಿಂದ ಹುಟ್ಟೂರ ಸನ್ಮಾನ ಕಾರ್ಯಕ್ರಮ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸಿ ಚಾಲನೆ ನೀಡಿ ಕಟೀಲು ಕ್ಷೇತ್ರದ ಅರ್ಚಕರಾದ ವೆಂಕಟರಮಣ ಆಸ್ರಣ್ಣ ರವರು ಆಶೀರ್ವಚನ ನೀಡಿ ಮನುಷ್ಯನ ಸಾಧನೆಗೆ ಏಕಾಗ್ರತೆ ಬೇಕು, ಪ್ರಶಸ್ತಿಯಿಂದ ಜವಾಬ್ದಾರಿ ಹೆಚ್ಚಿದ್ದು ಸಾಧನೆ ನಿರಂತರವಾಗಿ ನಡೆಯಲಿ ಎಂದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿ ಮಾತನಾಡಿ ಉತ್ತಮ ಸೇವಾ ಮನೋಭಾವದ ಮೂಲಕ ಸಮಾಜ ಸೇವಕರಾಗಿ ಎಲೆ ಮರೆಯ ಕಾಯಿಯಂತೆ ಮಾಡಿದ ಸಾಧನೆ ಅಭಿನಂದನೀಯ ಎಂದರು ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ವೇ.ಮೂ. ವಾದಿರಾಜ ಉಪಾಧ್ಯಾಯ ಕೊಲಕಾಡಿ,ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ, ಸೋಮೇಶ್ವರ ಪಶ್ಚಿಮ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಹಾಗೂ ನಿರ್ದೇಶಕ ರೋಹಿತ್ ಸ್ಯಾಂಕ್ಟುಶ್, ವಿಷ್ಣುಮೂರ್ತಿ ಭಟ್, ಶ್ರೀಕಾಂತ್ ಭಟ್ ಕೊಲಕಾಡಿ, ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ನ ವೆಂಕಟೇಶ ಹೆಬ್ಬಾರ್, ರಾಘವೇಂದ್ರ ಭಟ್ ಕೊಲ್ಲೂರು ಪದವು, ಜಿತೇಂದ್ರ ವಿ.ರಾವ್, ಪ್ರಾಣೇಶ್ ಭಟ್, ಶಶಿಕಲಾ ಉಪಾಧ್ಯಾಯ, ಶ್ರೀವತ್ಸ, ಶಿಕ್ಷಕಿ ಕಾಮೇಶ್ವರಿ ಭಟ್, ಅಶ್ವಿನ್ ಭಟ್ ಶಿಮಂತೂರು, ಗುರುರಾಜ್ ಭಟ್ ದೇಂದಡ್ಕ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಎಸ್.ಕೆ. ಶ್ರೀಪತಿ ಭಟ್ ಪರೆಂಕಿಲ ರವರನ್ನು ಪತ್ನಿ ದೀಪ ಎಸ್ ಭಟ್ ಸಮೇತ ಶಿಮಂತೂರು ಬ್ರಾಹ್ಮಣ ಬಂಧು ಮಿತ್ರರ ವತಿಯಿಂದ ಗೌರವಿಸಲಾಯಿತು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…

4 hours ago

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…

1 day ago

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…

1 day ago

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…

1 day ago

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…

1 day ago

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…

1 day ago