ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿ ಲಿಮಿಟೆಡ್ ವತಿಯಿಂದ ಸಪ್ತ ಸಂಧ್ಯಾ ಸಹಕಾರಿ ಚಿಂತನ ಸರಣಿ, ಸಾಂಸ್ಕೃತಿಕ ವೈಭವ, ಕಲ್ಪವೃಕ್ಷ , ಸಮಗ್ರ ಸಾಧಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇಂದಿನಿoದ ಆರಂಭಗೊoಡು 20 ರವರೆಗೆ ಬ್ಯಾಂಕಿನ ಕಲ್ಪವೃಕ್ಷ ಸಭಾಭವನದಲ್ಲಿ ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಸಹಕಾರಿ ರತ್ನ ಎಂ. ಬಾಹುಬಲಿ ಪ್ರಸಾದ್ ಹೇಳಿದ್ದಾರೆ.

ಅಖಿಲ ಭಾರತ 70 ನೇ ಸಹಕಾರ ಸಪ್ತಾಹದ ಹಿನ್ನೆಲೆಯಲ್ಲಿ ಶತಮಾನದ ಹಿನ್ನೆಲೆಯಿರುವ ಸಂಸ್ಥೆ ಇದಾಗಿದ್ದು, ಕಾರ್ಯಕ್ರಮದಲ್ಲಿ ನೃತ್ಯ ಸಂಗೀತ ಮನೋರಂಜನಾ ಕಾರ್ಯಕ್ರಮಗಳು ಮೇಳೈಸಲಿದೆ. ನ.15ರಂದು ರೈತರ ಸಂಕಷ್ಟ ಮತ್ತು ಪರಿಹಾರ ಕುರಿತು ಎಸ್.ಕೆ.ಡಿ.ಆರ್.ಡಿ.ಪಿಯ ಡಾ.ಎಲ್ ಮಂಜುನಾಥ್ ದಿಕ್ಸೂಚಿ ಭಾಷಣ ಮಾಡಲಿದ್ದು, ವಿಜ್ಞಾನಿ ಡಾ.ರವಿರಾಜ್ ಶೆಟ್ಟಿ ಜಿ, ಮೂಡುಬಿದಿರೆ ತಾಲೂಕು ಕ.ಸಾ.ಪ ಅಧ್ಯಕ್ಷರಾದ ವೇಣುಗೋಪಾಲ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಾಹಿತಿಯನ್ನು ನೀಡಿದ್ದಾರೆ.



