ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಬಲಿಪಾಡ್ಯಮ ದಿನ ಗೋಧೋಳಿ ಸಮಯದಲ್ಲಿ ಸಾಮೂಹಿಕ ಗೋಪೂಜೆ ದೇವಸ್ಥಾನದ ಗೋಶಾಲೆಯಲ್ಲಿ ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕರಾದ ವಿ.ಎಸ್. ಭಟ್ ಹಾಗೂ ವಸಂತ ಕೆದಿಲಾಯ ಗೋಶಾಲೆ ಆವರಣದಲ್ಲಿ ಗೋಪೂಜೆಯ ವಿಧಿ ವಿಧಾನಗಳನ್ನು ನೆರವೇರಿಸಿದ್ದಾರೆ. ಬಳಿಕ ಗೋವುಗಳಿಗೆ ಹೂವಿನ ಹಾರ ಹಾಕಿ ಅವಲಕ್ಕಿ, ದೋಸೆಯನ್ನು ತಿನ್ನಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಧ ಕೇಶವ ಪ್ರಸಾದ್ ಮುಳಿಯ ಅವರು ಮಾತಾನಾಡಿ, ಮೂರು ವರ್ಷಗಳಿಂದ ಗೋಪೂಜೆ ಮಾಡುತ್ತಾ ಬಂದಿದ್ದೇವೆ. ಕಳೆದ ವರ್ಷದಿಂದ ಗೋಶಾಲೆ ತೆರೆದಿದ್ದೇವೆ. ಈ ಭಾರಿಯೂ ಗೋಪೂಜೆ ನಡೆದಿದೆ. ಈ ಸಂದರ್ಭದಲ್ಲಿ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳನ್ನು ನೆನಪಿಸಬೇಕಾಗುತ್ತದೆ. ಏಕೆಂದರೆ ದೇಶಿ ವಿವಿಧ ತಳಿಗಳ ಪುನರುತ್ಥಾನಕ್ಕಾಗಿ ಗೋವಿನ ಆಂದೋಲನ ಮಾಡುವಲ್ಲಿ ಅವರ ಅನುಗ್ರಹವಿದೆ ಎಂದು ಹೇಳಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಿ.ಐತ್ತಪ್ಪ ನಾಯ್ಕ್, ಡಾ. ಸುಧಾ ಎಸ್. ರಾವ್, ವೀಣಾ ಬಿ.ಕೆ., ಕಾರ್ಯನಿರ್ವಹಣಾಧಿಕಾರಿಯಾದ ಕೆ.ವಿ.ಶ್ರೀನಿವಾಸ, ಗೋಪೂಜೆ ಸೇವಾಕರ್ತರು, ಭಕ್ತಾದಿಗಳು ಉಪಸ್ಥಿತರಿದ್ದರು
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…