ಉಡುಪಿ : ಮಲ್ಪೆ ಪೊಲಿಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ದಾರುಣ ಘಟನೆಯೊಂದು ಎಲ್ಲರ ಎದೆ ನಡುಗಿಸಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಬಂಧಿಸಿದ್ದಾರೆ. ಪ್ರವೀಣ್ ಅರುಣ್ ಚೌಗಲೆ ಬಂಧಿತ ಆರೋಪಿ.
ಈತನನ್ನು ಕುಡಚಿಯಲ್ಲಿ ಅರೆಸ್ಟ್ ಮಾಡಲಾಗಿದೆ. ಉಡುಪಿ ಪೊಲೀಸರು ಕುಡಚಿಗೆ ಆಗಮಿಸಿ ಆರೋಪಿಯನ್ನು ಕರೆದೊಯ್ದಿದ್ದಾರೆ..ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಹತ್ಯೆ ಮಾಡಲಾಗಿತ್ತು ಹಾಗೂ ಕೊಲೆಯಾದವರನ್ನು ಹಸೀನಾ (46 ), ಅಫ್ನಾನ್ (23 ), ಅಯ್ನಾಝ್ (21 ), ಆಸಿಂ (12 ) ಎಂದು ಗುರುತಿಸಲಾಗಿತ್ತು.
ಈ ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿದ್ದು, ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಸಹಿತ, ಮಾಹಿತಿ ಸಂಗ್ರಹಿಸುತ್ತಿದ್ದರು. ಏಕಾಏಕಿ ಮನೆಗೆ ನುಗ್ಗಿ ಮಾತಿನ ಚಕಮಕಿ ನಡೆದ ಬಳಿಕ ಮೊದಲು ಮಹಿಳೆ ಹಾಗೂ ಮಕ್ಕಳಾದ ಹಸಿನಾ, ಅಫ್ನಾನ್, ಐನಾಜ್ ಗೆ ಇರಿದ ದುಷ್ಕರ್ಮಿ, ಬಳಿಕ ಅಲ್ಲೇ ಆಟವಾಡುತ್ತಿದ್ದ ಆಸೀಮ್ ಸದ್ದು ಕೇಳಿ ಒಳ ಬರುತ್ತಿದ್ದಂತೆ ಆತನನ್ನು ಕೂಡ ದುಷ್ಕರ್ಮಿ ಇರಿದುಕೊಂದಿದ್ದಾನೆ ಎನ್ನಲಾಗಿತ್ತು. ಬೊಬ್ಬೆ ಕೇಳಿ ಹೊರಗಡೆ ಬಂದ ಪಕ್ಕದ ಮನೆ ಯುವತಿಯನ್ನು ಬೆದರಿಸಿ ದುಷ್ಕರ್ಮಿ ಅಲ್ಲಿಂದ ಕಾಲ್ಕಿತ್ತಿದ್ದನು. ಇನ್ನು ಜೀವಾಂತ್ಯಗೊಳಿಸಿದ ಮಹಿಳೆಯ ಅತ್ತೆಗೂ ತೀವ್ರ ತರಹದ ಗಾಯಗಳಾಗಿದ್ದವು. ಈ ಘಟನೆಯ ಕುರಿತಂತೆ ತನಿಖೆಗೆ ಇಳಿದಂತ ಪೊಲೀಸರು, ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಆರೋಪಿ ಪ್ರವೀಣ್ ಅರುಣ್ ಚೌಗಲೆ ಎಂಬಾತನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಮಂಗಳೂರು ಏರ್ ಪೋರ್ಟ್ ನಲ್ಲಿ ಸೆಕ್ಯುರಿಟಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದನು ಎಂದು ಹೇಳಲಾಗುತ್ತಿದ್ದು ಈತನ ಹೆಸರು ಪ್ರವೀಣ್ ಅರುಣ್ ಚೌಗಲೆ ಎಂದು ತಿಳಿದು ಬಂದಿದೆ. ಮಹಾರಾಷ್ಟ್ರ ಸಾಂಗ್ಲಿ ಮೂಲದ ಅರುಣ್ ಚೌಗಲೆ CRPF ಸಿಬ್ಬಂದಿಯಾಗಿದ್ದ. ಕುಡಚಿಯ ಸಂಬಂಧಿ ಮನೆಯಲ್ಲಿ ಅಡಗಿ ಕುಳಿತಿದ್ದ ಅರುಣ್ ಚೌಗಲೆ ನನ್ನು ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಆರೋಪಿ ಅರೆಸ್ಟ್ ಮಾಡಲಾಗಿದೆ. ಈಗ ಆತನನ್ನ ಕಡಚಿಯಲ್ಲಿ ಬಂಧಿಸಿದ್ದು, ಉಡುಪಿಗೆ ಕರೆತರಲಾಗುತ್ತಿದೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್‌ನ ಭೂಗತ ಬಂಕರ್‌ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…