ಹಳೆಯಂಗಡಿ: ರಂಗಭೂಮಿ ಕಲಾವಿದ ಹಾಗೂ ಚಲನಚಿತ್ರ ನಟ ಪ್ರಕಾಶ್ ತುಮಿನಾಡ್ ಇಂದು ತೋಕೂರು ಸುಬ್ರಮಣ್ಯ ದೇವಳಕ್ಕೆ ಭೇಟಿ ನೀಡಿ, ಶ್ರೀದೇವರ ದರ್ಶನ ಪಡೆದರು. ಈ ಸಂದರ್ಭ ದೇವಳದ ಪ್ರಧಾನ ಅರ್ಚಕರಾದ ಶ್ರೀ ಮಧುಸೂದನ ಭಟ್, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾದ ಮೋಹನ್ ದಾಸ್, ಪುರುಷೋತ್ತಮ ಕೋಟ್ಯಾನ್, ಬೆಂಗಳೂರು ಸಮಿತಿಯ ಶ್ರೀ ಹರಿಪ್ರಸಾದ್ ಶೆಟ್ಟಿ, ಗಣೇಶ್ ಪೂಜಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.





