ಮುಲ್ಕಿ: ಶ್ರೀ ಚಂದ್ರಶೇಖರ ಸ್ವಾಮೀಜಿ ಟ್ರಸ್ಟ್ ಹಾಗೂ ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ ವತಿಯಿಂದ ಮಕ್ಕಳ ದಿನಾಚರಣೆ ಹಾಗೂ ಸಾಧಕರಿಗೆ ಗೌರವ ಕಾರ್ಯಕ್ರಮ ಕೆಂಚನಕೆರೆ ಕಾಮತ್ ಕಾಂಪೌಂಡ್ ನಲ್ಲಿ ನಡೆಯಿತು.
ಮಕ್ಕಳ ದಿನಾಚರಣೆಗೆ ಚಾಲನೆ ನೀಡಿ ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ ನ ಸ್ಥಾಪಕ ಅಧ್ಯಕ್ಷ ವೆಂಕಟೇಶ ಹೆಬ್ಬಾರ್ ಮಾತನಾಡಿ ಸೇವಾ ಸಂಸ್ಥೆಗಳ ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಕಾರ್ಯ ನಡೆಯುತ್ತಿದ್ದು ಇದು ಇತರ ಮಕ್ಕಳಿಗೂ ಪ್ರೇರಣೆಯಾಗಿ ಸಾಧನೆ ನಿರಂತರವಾಗಿ ನಡೆಯಲಿ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕಿಲ್ಪಾಡಿ ಶ್ರೀ ಚಂದ್ರಶೇಖರ ಸ್ವಾಮೀಜಿ ಸೇವಾ ಟ್ರಸ್ಟ್ ನ ಸಂಚಾಲಕ ಪುನೀತ್ ಕೃಷ್ಣ ಮಾತನಾಡಿ ಸೇವಾ ಟ್ರಸ್ಟ್ ನಿಂದ ಅನೇಕ ಸೇವಾ ಕಾರ್ಯಗಳು ನಿರಂತರವಾಗಿ ನಡೆಯುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಸಾಧನೆ ಮಾಡಿ ರಾಷ್ಟ್ರೀಯ ಮಟ್ಟಕ್ಕೆ ತೇರ್ಗಡೆಯಾದ ಮಾಧವ ಕಾಮತ್ ಕೆಂಚನಕೆರೆ ರವರನ್ನು ಗೌರವಿಸಲಾಯಿತು.
ಈ ಸಂದರ್ಭ ಪತ್ರಕರ್ತ ರಘುನಾಥ ಕಾಮತ್, ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳಾದ ಪ್ರತಿಭಾ ಹೆಬ್ಬಾರ್, ಶಿವಪ್ರಸಾದ್, ಅಶ್ವಿನಿ, ಶಿವಾನಿ, ಸಾಧನ, ಶ್ರೀಧರ್ ಕಾಮತ್, ಸುಧಾ ಕಾಮತ್, ಸ್ಮಿತಾ ಕಾಮತ್, ಶ್ರೇಯ ಕಾಮತ್, ಜನಾರ್ದನ್, ವಿವೇಕ್ ,ವಿಖ್ಯಾತ ಮತ್ತಿತರರು ಉಪಸ್ಥಿತರಿದ್ದರು.
ಮಕ್ಕಳ ದಿನಾಚರಣೆ ಅಂಗವಾಗಿ ಆಟೋಟ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು. ರಘುನಾಥ ಕಾಮತ್ ನಿರೂಪಿಸಿದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್‌ನ ಭೂಗತ ಬಂಕರ್‌ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…