ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಭಾರತ ತಂಡ ನ್ಯೂಝಿಲ್ಯಾಂಡ್ ವಿರುದ್ಧ 70 ರನ್ ಗಳ ಜಯಭೇರಿ ಬಾರಿಸಿದೆ.

ಏಕದಿನ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಜಯಿಸಿದ ಭಾರತ, 4ನೇ ಬಾರಿಗೆ ಫೈನಲ್ ಪ್ರವೇಶಿಸಿದೆ. 2011ರ ನಂತರ ಫೈನಲ್ಗೆ ಎಂಟ್ರಿಕೊಟ್ಟಿದೆ.
ಈ ಗೆಲುವಿನೊಂದಿಗೆ 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ಸೇಡನ್ನು ರೋಹಿತ್ ಪಡೆ, ತೀರಿಸಿಕೊಂಡಿದೆ. ಕೊನೆಯ ಬಾರಿ 2011ರಲ್ಲಿ ಫೈನಲ್ಗೇರಿದ್ದ ಭಾರತ ಪ್ರಶಸ್ತಿ ಗೆದ್ದಿತ್ತು. 140 ಕೋಟಿ ಭಾರತೀಯರ ಕನಸಿಗೆ ಇನ್ನೊಂದೆ ಹೆಜ್ಜೆ ಬಾಕಿ ಇದೆ
ವಾಂಖೆಡೆ ಮೈದಾನದಲ್ಲಿ ನಡೆದ ವಿಶ್ವಕಪ್ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಭಾರತ, ನಿಗದಿತ 50 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 397 ರನ್ಗಳ ಬೃಹತ್ ಮೊತ್ತ ಕಲೆ ಹಾಕಿತು. ವಿರಾಟ್ ಕೊಹ್ಲಿ 117 ರನ್, ಶ್ರೇಯಸ್ ಅಯ್ಯರ್ 105 ರನ್, ಶುಭ್ಮನ್ ಗಿಲ್ ಅಜೇಯ 80 ರನ್ ಗಳಿಸಿದರು. ಈ ಗುರಿ ಬೆನ್ನಟ್ಟಿದ ನಿಗದಿತ 48.5 ಓವರ್ಗಳಲ್ಲಿ 327 ರನ್ಗಳಿಗೆ ಆಲೌಟ್ ಆಯಿತು. ಡೇರಿಲ್ ಮಿಚೆಲ್ 134 ರನ್ ಗಳಿಸಿದರು. ಭಾರತದ ಪರ ಶಮಿ 7 ವಿಕೆಟ್ ಪಡೆದು ಮಿಂಚಿದರು.



