ಮುಲ್ಕಿ: ಯುವ ವಾಹಿನಿ ಮುಲ್ಕಿ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಮುಲ್ಕಿ ಸಿಎಸ್ಐ ಬಾಲಿಕಾಶ್ರಮದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಯುವವಾಹಿನಿ ಘಟಕದ ಅಧ್ಯಕ್ಷ ಮಾಧವ ಪೂಜಾರಿ ಕಿಲ್ಪಾಡಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷ ಲೋಕೇಶ್ ಅಮೀನ್ ಮಾತನಾಡಿ ಮಕ್ಕಳು ದೇವರ ಸಮಾನರಾಗಿದ್ದು ನಿಷ್ಕಲ್ಮಶ ಮನೋಭಾವದಿಂದ ಉತ್ತಮ ಶಿಕ್ಷಣ ಪಡೆದು ಸೇವಾ ಮನೋಭಾವ ಬೆಳೆಸಿಕೊಳ್ಳಿ ಎಂದರು.


ಯುವ ವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಹರೀಶ್ ಕೆ ಪೂಜಾರಿ, ಬಾಲಿಕಾಶ್ರಮದ ಮೇಲ್ವಿಚಾರಕಿ ಶಾಂತಿ, ನಿರ್ಮಲ ಲೊಕೇಶನ್ ಅಮೀನ್,ಯುವ ವಾಹಿನಿ ಸಂಸ್ಥೆಯ ಕಾರ್ಯದರ್ಶಿ ವಿನಯ ವಿಶ್ವನಾಥ್, ಕೋಶಾಧಿಕಾರಿ ಲತೀಶ್ ಸಾಲ್ಯಾನ್, ವಿದ್ಯಾರ್ಥಿ ಸಂಘಟನಾ ಕಾರ್ಯದರ್ಶಿ ಹಾರ್ದಿಕ್ ಜೆ. ಕುಬೆವೂರು , ಜಯ ಕುಮಾರ್ ಕುಬೆವೂರು,ಸತೀಶ್ ಕಿಲ್ಪಾಡಿ , ಉದಯ ಅಮೀನ್ ಮಟ್ಟು ಮತ್ತಿತರರು ಉಪಸ್ಥಿತರಿದ್ದರು.
ಮಕ್ಕಳ ದಿನಾಚರಣೆ ಪ್ರಯುಕ್ತ ಮಕ್ಕಳಿಗೆ ವಿವಿಧ ಸ್ಪರ್ಧೆ ನಡೆದು ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.



