ಉತ್ತರ ಪ್ರದೇಶದ ಇಟವಾ ಜಿಲ್ಲೆಯಲ್ಲಿ ಪ್ರಯಾಣಿಕರಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡು 19 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದೆಹಲಿ-ಸಹರ್ಸಾ ವೈಶಾಲಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲಿನ ಒಂದು ಕೋಚ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ವಿಷಯ ಗೊತ್ತಾಗುತ್ತಿದ್ದಂತೆಯೇ ಅಗ್ನಿಶಾಮ ಸಿಬ್ಬಂದಿ ಸ್ಥಳಕ್ಕೆ ಡೌಡಾಯಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಬೆಂಕಿ ತಗುಲಿ ದಟ್ಟ ಹೊಗೆ ಆವರಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಗಾಬರಿಗೊಂಡ ಪ್ರಯಾಣಿಕರು ಬೋಗಿಯಿಂದ ಇಳಿದು ವೀಕ್ಷಣೆ ಮಾಡುತ್ತಿರೋದನ್ನು ನೋಡಬಹುದು.
ಬಿಹಾರದ ಶಹರ್ಸಾ ದಿಂದ ದೆಹಲಿಗೆ ರೈಲು ಪ್ರಯಾಣಿಸುತ್ತಿತ್ತು. ಬೋಗಿ ಎಸ್-6 ನಲ್ಲಿ ಮಧ್ಯರಾತ್ರಿ 2.30ಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ರೈಲ್ವೇ ಇಲಾಖೆ ಅಧಿಕಾರಿ ಉದಯ್ ಶಂಕರ್ ತಿಳಿಸಿದ್ದಾರೆ. ಯಾವುದೇ ಪ್ರಾಣಹಾನಿ ಆಗಿಲ್ಲ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…